ತೆರಿಗೆ ಕಡಿತದ ನಂತರ ಏರದ ಇಂಧನ ದರ: ಗ್ರಾಹಕರು ನಿರುಮ್ಮಳ

ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಹೊರೆಯನ್ನು ಕಡಿಮೆ ಮಾಡಿದ ನಂತರದ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆ ಕಂಡು ಬಂದಿಲ್ಲ.
ತೈಲ ಮಾರಾಟ ಕಂಪನಿಗಳು ಅನುಸರಿಸುತ್ತಿರುವ ದೈನಂದಿನ ಬೆಲೆ ಪರಿಷ್ಕರಣೆ ಕಾರ್ಯವಿಧಾನದ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತ ಮೂರನೇ ದಿನವಾದ ಭಾನುವಾರವೂ ಬದಲಾಗದೆ ಉಳಿದಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಬುಧವಾರ ₹110.04 ಆಗಿದ್ದ ಪೆಟ್ರೋಲ್, ಕೇಂದ್ರ ಸರ್ಕಾರದ ತೆರಿಗೆ ಕಡಿತದ ನಿರ್ಧಾರದೊಂದಿಗೆ ಗುರುವಾರ ಮುಂಜಾನೆ 6 ಗಂಟೆಗೆ 103.97 ಪೈಸೆಗೆ ಇಳಿಕೆಯಾಯಿತು. ಅಂದಿನಿಂದ ಇಂದಿನ ವರೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಡೀಸೆಲ್ ₹86.67 ಇದೆ.
ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹109.98 ಮತ್ತು ಡೀಸೆಲ್ ಲೀಟರ್‌ಗೆ ₹94.14ಗೆ ಮಾರಾಟವಾಗುತ್ತಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ₹100.58 ಆಗಿದ್ದರೆ, ಡೀಸೆಲ್ ₹85.01 ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.