ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

Last Updated 1 ಅಕ್ಟೋಬರ್ 2021, 5:50 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶುಕ್ರವಾರವೂ ಇಂಧನ ದರ ಹೆಚ್ಚಿಸಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಗರಿಷ್ಠ ಮಟ್ಟಕ್ಕೆ ಏರಿಕೆ ಆಗಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ದೇಶದಲ್ಲಿಯೂ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ತೈಲ ಮಾರಾಟ ಕಂಪನಿಗಳು ಹೇಳಿವೆ.

ಪ್ರತಿ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಮತ್ತು ಡೀಸೆಲ್ ಬೆಲೆ 30 ಪೈಸೆ ಹೆಚ್ಚಾಗಿದೆ. ದೆಹಲಿಯಲ್ಲೀಗ ಪೆಟ್ರೋಲ್ ಬೆಲೆ ₹101.89 ಮತ್ತು ಡೀಸೆಲ್ ಬೆಲೆ ₹90.17 ಆಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹105.44 ಮತ್ತು ಡೀಸೆಲ್ ದರ ₹95.70 ಆಗಿದೆ.

ಮುಂಬೈಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹107.96 ಹಾಗೂ ಡೀಸೆಲ್ ಬೆಲೆ ₹97.84 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT