ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ದಿನಗಳಲ್ಲಿ ಆರು ಬಾರಿ ಪೆಟ್ರೋಲ್, ಡೀಸೆಲ್‌ ದರ ಏರಿಕೆ

Last Updated 28 ಮಾರ್ಚ್ 2022, 1:31 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಏಳು ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡುಬಂದಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೆಹಲಿಯಲ್ಲಿ ಪೆಟ್ರೋಲ್‌ (30 ಪೈಸೆ/ಲೀಟರ್‌) ಹಾಗೂ ಡೀಸೆಲ್‌(35 ಪೈಸೆ/ಲೀಟರ್‌) ದರಗಳನ್ನು ಹೆಚ್ಚಿಸಿವೆ.

ದರ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆಯು ಲೀಟರಿಗೆ ₹99.41 ಹಾಗೂ ಡೀಸೆಲ್‌ ಬೆಲೆಯು ₹90.77ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ ಪೆಟ್ರೋಲ್‌ (31 ಪೈಸೆ/ಲೀಟರ್‌) ಹಾಗೂ ಡೀಸೆಲ್‌(37 ಪೈಸೆ/ಲೀಟರ್‌) ದರಗಳನ್ನು ಹೆಚ್ಚಿಸಲಾಗಿದೆ.

ಈ ಮೂಲಕ ಮುಂಬೈನಲ್ಲಿ ಪೆಟ್ರೋಲ್‌ ಬೆಲೆಯು ಲೀಟರಿಗೆ ₹114.19 ಹಾಗೂ ಡೀಸೆಲ್‌ ಬೆಲೆಯು ₹98.50ಕ್ಕೆ ಏರಿಕೆಯಾಗಿದೆ.

ಭಾನುವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT