ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳ ಅವಧಿಯಲ್ಲಿ 17 ಬಾರಿ ತೈಲ ಬೆಲೆ ಹೆಚ್ಚಳ

Last Updated 1 ಜೂನ್ 2021, 14:24 IST
ಅಕ್ಷರ ಗಾತ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಂಗಳವಾರ ಹೆಚ್ಚಿಸಿವೆ. ಇದರಿಂದಾಗಿ, ಮೇ ತಿಂಗಳ 4ರ ನಂತರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 17 ಬಾರಿ ಹೆಚ್ಚಳ ಕಂಡಂತಾಗಿದೆ.

ಮಂಗಳವಾರ ಪೆಟ್ರೋಲ್‌ ಬೆಲೆ ಲೀಟರ್‌ಗೆ 26 ಪೈಸೆ, ಡೀಸೆಲ್ ಬೆಲೆ 23 ಪೈಸೆ ಹೆಚ್ಚಳವಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆಯು ₹ 97.64, ಡೀಸೆಲ್ ಬೆಲೆಯು ₹ 90.51 ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹ 94.49 ಹಾಗೂ ಡೀಸೆಲ್ ಬೆಲೆ ₹ 85.38 ಆಗಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಈಗ ₹ 100.72, ಡೀಸೆಲ್ ಬೆಲೆ ₹ 92.69 ಆಗಿದೆ. ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳು ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗೆ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ತೈಲ ಮಾರಾಟ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರಲಿಲ್ಲ.

ಒಂದು ತಿಂಗಳ ಅವಧಿಯಲ್ಲಿ 17 ಬಾರಿ ಆಗಿರುವ ಬೆಲೆ ಹೆಚ್ಚಳದ ಪರಿಣಾಮವಾಗಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ₹ 4.09 ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ ₹ 4.65ರಷ್ಟು ಏರಿಕೆ ಆದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT