ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ: 12 ದಿನಗಳಲ್ಲಿ ₹7.20 ಹೆಚ್ಚಳ

Last Updated 2 ಏಪ್ರಿಲ್ 2022, 1:55 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಶನಿವಾರ ತಲಾ 80 ಪೈಸೆಯಷ್ಟು ಏರಿಕೆಯಾಗಿದೆ. ಇದರೊಂದಿಗೆ ಕಳೆದ 12 ದಿನಗಳಲ್ಲಿ ಉಭಯ ಇಂಧನಗಳ ದರ ಪ್ರತಿ ಲೀಟರ್‌ಗೆ ₹7.20ರಷ್ಟು ಹೆಚ್ಚಾದಂತಾಗಿದೆ.

ರಾಷ್ಟ್ರ ರಾಜಧಾನಿಯಲ್ಲೀಗ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕ್ರಮವಾಗಿ ₹102.61 ಮತ್ತು ₹93.87 ಆಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕಳೆದ ನಾಲ್ಕೂವರೆ ತಿಂಗಳ ಕಾಲ ಇಂಧನ ದರ ಪರಿಷ್ಕರಿಸಿರಲಿಲ್ಲ. ಮಾರ್ಚ್ 22ರಿಂದ ಪರಿಷ್ಕರಣೆ ಆರಂಭಿಸಿದ್ದವು. ಬಳಿಕ ಈವರೆಗೆ 10 ಬಾರಿ ದರ ಪರಿಷ್ಕರಿಸಲಾಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರ ₹108.13 ಮತ್ತು 92.03 ಆಗಿದೆ.

ಬೇರೆಬೇರೆ ರಾಜ್ಯಗಳಲ್ಲಿ ಸ್ಥಳೀಯ ತೆರಿಗೆಗೆ ಅನುಗುಣವಾಗಿ ಪೆಟ್ರೋಲ್‌, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡುಬರಲಿದೆ.

ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರವನ್ನು ಶುಕ್ರವಾರಸಿಲಿಂಡರ್‌ಗೆ ₹250ರಷ್ಟು ಹೆಚ್ಚಳ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT