ಸೋಮವಾರ, ಅಕ್ಟೋಬರ್ 18, 2021
22 °C

ಕಚ್ಚಾ ತೈಲ ದರ ಏರಿಕೆ: ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಂಗಳವಾರ ಪೆಟ್ರೋಲ್‌ ದರವನ್ನು ಲೀಟರಿಗೆ 20 ಪೈಸೆಯಷ್ಟು, ಡೀಸೆಲ್‌ ದರವನ್ನು ಲೀಟರಿಗೆ 25 ಪೈಸೆಯಷ್ಟು ಹೆಚ್ಚಿಸಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬ್ಯಾರಲ್‌ಗೆ 80 ಡಾಲರ್‌ಗಳ ಸಮೀಪ ಬಂದಿರುವುದರಿಂದ ಇಂಧನ ದರದಲ್ಲಿ ಹೆಚ್ಚಳ ಆಗಿದೆ.

ಎಚ್‌ಪಿಸಿಎಲ್‌ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಮಂಗಳವಾರ ಪೆಟ್ರೋಲ್‌ ದರ ₹ 104.9 ಮತ್ತು ಡೀಸೆಲ್‌ ದರ ₹ 95.03ಕ್ಕೆ ತಲುಪಿದೆ.

ದೆಹಲಿಯಲ್ಲಿ ಪೆಟ್ರೋಲ್‌ ದರ ₹ 101.19 ಮತ್ತು ಡೀಸೆಲ್‌ ದರ ₹ 89.57ಕ್ಕೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್‌ ದರ ₹ 107.47 ಮತ್ತು ಡೀಸೆಲ್‌ ದರ ₹ 97.21ಕ್ಕೆ ಏರಿಕೆ ಆಗಿದೆ.

ಎರಡು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪೆಟ್ರೋಲ್‌ ದರ ಹೆಚ್ಚಿಸಲಾಗಿದೆ. ಡೀಸೆಲ್‌ ದರ ನಾಲ್ಕನೇ ಬಾರಿ ಹೆಚ್ಚಾಗಿದೆ. ಸೆಪ್ಟೆಂಬರ್‌ 24ರ ನಂತರದಲ್ಲಿ ಡೀಸೆಲ್‌ ದರ ಲೀಟರಿಗೆ 95 ಪೈಸೆ ಹೆಚ್ಚಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಮೂರು ವರ್ಷಗಳ ಗರಿಷ್ಠ ಮಟ್ಟದ ಸಮೀಪಕ್ಕೆ ಬಂದಿದ್ದು, ಜಾಗತಿಕ ಉತ್ಪಾದನೆಯಲ್ಲಿ ಅಡಚಣೆ ಆಗಿರುವುದರಿಂದ ಕಂಪನಿಗಳನ್ನು ತಮ್ಮ ಸಂಗ್ರಹದಿಂದ ಹೆಚ್ಚು ಕಚ್ಚಾ ತೈಲವನ್ನು ಹೊರತೆಗೆಯುತ್ತಿವೆ. ಅಮೆರಿಕದ ಕಚ್ಚಾ ತೈಲ ಸಂಗ್ರಹದ ಮಟ್ಟವು ಮೂರು ವರ್ಷಗಳ ಕನಿಷ್ಠ ಮಟ್ಟಕ್ಕೆ ಬರುತ್ತಿದೆ.

ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ ಮತ್ತು ಲಸಿಕೆ ನೀಡುವ ಪ್ರಮಾಣದಲ್ಲಿ ಹೆಚ್ಚಳ ಕಂಡುಬರುತ್ತಿರುವುದರಿಂದ ಕಚ್ಚಾ ತೈಲದ ಬೇಡಿಕೆಯು ಜಾಗತಿಕ ಮಟ್ಟದಲ್ಲಿ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ‘ಒಪೆಕ್‌+’ ಒಕ್ಕೂಟವು ನಿಧಾನವಾಗಿ ಉತ್ಪಾದನೆ ಮೇಲಿನ ನಿರ್ಬಂಧಗಳನ್ನು ತೆಗೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು