ಶುಕ್ರವಾರ, ಜುಲೈ 1, 2022
22 °C

ಎರಡನೆಯ ದಿನವೂ ತೈಲ ಬೆಲೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬುಧವಾರವೂ ತಲಾ 80 ಪೈಸೆಯಷ್ಟು ಹೆಚ್ಚಿಸಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆಯು 102.24ಕ್ಕೆ ಹಾಗೂ ಡೀಸೆಲ್ ಬೆಲೆಯು 86.57ಕ್ಕೆ ತಲುಪಿದೆ.

ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 110 ಡಾಲರ್‌ನಿಂದ 120 ಡಾಲರ್‌ ನಡುವೆ ಇದ್ದರೆ, ತೈಲ ಮಾರಾಟ ಕಂಪನಿಗಳು ಡೀಸೆಲ್ ಬೆಲೆಯನ್ನು ಲೀಟರಿಗೆ ₹ 13.1ರಿಂದ ₹ 24.9ರವರೆಗೆ ಹಾಗೂ ಪೆಟ್ರೋಲ್ ಬೆಲೆಯನ್ನು ₹ 10.6ರಿಂದ ₹ 22.3ರವರೆಗೆ ಹೆಚ್ಚಿಸಬೇಕಾಗುತ್ತದೆ ಎಂದು ಕೋಟಕ್ ಇನ್‌ಸ್ಟಿಟ್ಯೂಷನಲ್ ಈಕ್ವಿಟಿಸ್‌ ಸಂಸ್ಥೆಯು ಹೇಳಿದೆ.

ಪ್ರಸಕ್ತ ತ್ರೈಮಾಸಿಕದಲ್ಲಿ ಕಚ್ಚಾ ತೈಲದ ಸರಾಸರಿ ಬೆಲೆಯು ಬ್ಯಾರೆಲ್‌ಗೆ 110ರಿಂದ 120 ಡಾಲರ್‌ ನಡುವೆ ಇದ್ದರೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಲೀಟರಿಗೆ ಸರಿಸುಮಾರು ₹ 15ರಿಂದ ₹ 20ರವರೆಗೆ ಹೆಚ್ಚಿಸಬೇಕಾಗುತ್ತದೆ ಎಂದು ಕ್ರಿಸಿಲ್‌ ರಿಸರ್ಚ್‌ನ ನಿರ್ದೇಶಕ ಹೇತಲ್ ಗಾಂಧಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು