ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ ಐದನೇ ದಿನ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

Last Updated 24 ಅಕ್ಟೋಬರ್ 2021, 11:05 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ. ಇದರಿಂದಾಗಿ ಸತತ ಐದನೇ ದಿನವೂ ದರ ಹೆಚ್ಚಳ ಆದಂತಾಗಿದೆ.

ಭಾನುವಾರದ ದರ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹111.29 ಮತ್ತು ಡೀಸೆಲ್‌ ದರ ಲೀಟರಿಗೆ ₹ 102.17ಕ್ಕೆ ಏರಿಕೆ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್‌ ದರ ₹ 107.59 ಮತ್ತು ಡೀಸೆಲ್‌ ದರ ₹ 96.32ಕ್ಕೆ ತಲುಪಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಇಂಧನ ದರದಲ್ಲಿ ವ್ಯತ್ಯಾಸ ಆಗುತ್ತದೆ. ಡೀಸೆಲ್‌ ದರವು ಲೀಟರಿಗೆ ₹ 100ರ ಗಡಿ ದಾಟಿರುವ ರಾಜ್ಯಗಳ ಸಾಲಿಗೆ ಇದೀಗ ಪಶ್ಚಿಮ ಬಂಗಾಳವೂ ಸೇರಿಕೊಂಡಿದೆ.

ಸೆಪ್ಟೆಂಬರ್‌ 28ರಿಂದ ಈವರೆಗೆ ಪೆಟ್ರೋಲ್‌ ದರವನ್ನು ಒಟ್ಟು 21 ಬಾರಿ ಹೆಚ್ಚಿಸಲಾಗಿದೆ. ಇದರಿಂದ ಲೀಟರಿಗೆ ₹ 6.4ರಷ್ಟು ಏರಿಕೆ ಆಗಿದೆ. ಅದೇ ರೀತಿ ಡೀಸೆಲ್‌ ದರವನ್ನು ಸೆಪ್ಟೆಂಬರ್‌ 24ರಿಂದ ಈವರೆಗೆ ಒಟ್ಟು 24 ಬಾರಿ ಏರಿಕೆ ಮಾಡಿದ್ದು, ಇದರಿಂದಾಗಿ ಪ್ರತಿ ಲೀಟರಿಗೆ ₹ 7.70ರಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT