ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಳ

ಅಕ್ಷರ ಗಾತ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಮಾರಾಟ ದರವನ್ನು ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಳ ಮಾಡಲಾಗಿದೆ. ಮಾರ್ಚ್‌ 24ರಂದು ದೇಶದಾದ್ಯಂತ ಲಾಕ್‌ಡೌನ್‌ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಪೆಟ್ರೋಲ್, ಡೀಸೆಲ್ ಚಿಲ್ಲರೆ ಮಾರಾಟ ದರ ಏರಿಕೆ ಮಾಡಲಾಗಿದೆ.

ಇದರೊಂದಿಗೆ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹78.18 ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹69.99 ಆಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ ಪ್ರತಿ ಲೀಟರ್‌ಗೆ ₹71.86 ಹಾಗೂ ₹69.99 ಆಗಿದೆ.

ಮುಂಬೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹78.91 ಆಗಿದೆ.

ಲಾಕ್‌ಡೌನ್‌ ವೇಳೆಯಲ್ಲಿ ಅನೇಕ ರಾಜ್ಯಗಳು ಇಂಧನ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದರೂ ದೇಶದಾದ್ಯಂತ ಏರಿಕೆಯಾಗಿರುವುದು ಇದೇ ಮೊದಲಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರವು ಕ್ರಮವಾಗಿ ಕಳೆದ ತಿಂಗಳು ₹10 ಮತ್ತು ₹13ರಷ್ಟು ಹೆಚ್ಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT