ಬುಧವಾರ, ಡಿಸೆಂಬರ್ 8, 2021
19 °C
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ ಪರಿಣಾಮ

Repeat ಪೆಟ್ರೋಲ್‌ 25 ಪೈಸೆ, ಡೀಸೆಲ್‌ 30 ಪೈಸೆ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಂಗಳವಾರ ಪೆಟ್ರೋಲ್‌ ದರವನ್ನು ಲೀಟರಿಗೆ 25 ಪೈಸೆ ಮತ್ತು ಡೀಸೆಲ್‌ ದರವನ್ನು ಲೀಟರಿಗೆ 30 ಪೈಸೆ ಹೆಚ್ಚಿಸಿವೆ. ಇದರಿಂದಾಗಿ ದೇಶದಾದ್ಯಂತ ಇಂಧನ ದರಗಳು ಗರಿಷ್ಠ ಮಟ್ಟವನ್ನು ತಲುಪಿವೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು 2014ರ ನಂತರದ ಗರಿಷ್ಠ ಮಟ್ಟವನ್ನು ತಲುಪಿರುವುದರಿಂದ ದೇಶದಲ್ಲಿ ಇಂಧನ ದರ ಏರಿಕೆ ಮಾಡಲಾಗುತ್ತಿದೆ. ಬ್ರೆಂಟ್‌ ಕಚ್ಚಾತೈಲ ದರವು ಬ್ಯಾರೆಲ್‌ಗೆ 81.51 ಡಾಲರ್‌ಗಳಿಗೆ ತಲುಪಿದ್ದರೆ, ವೆಸ್ಟ್‌ ಟೆಕ್ಸಾಸ್‌ ಇಂಟರ್‌ಮಿಡಿಯೇಟ್‌ ದರ್ಜೆಯ ಕಚ್ಚಾ ತೈಲ ದರವು ಬ್ಯಾರೆಲ್‌ಗೆ 77.76 ಡಾಲರ್‌ಗೆ ಏರಿಕೆ ಆಗಿದೆ.

ಮಂಗಳವಾರದ ದರ ಹೆಚ್ಚಳದಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ₹ 106.17 ಮತ್ತು ಡೀಸೆಲ್‌ ದರ ₹ 96.62ಕ್ಕೆ ತಲುಪಿದೆ. ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 102.64 ಮತ್ತು ಡೀಸೆಲ್‌ ದರ ₹ 91.07ಕ್ಕೆ ತಲುಪಿದೆ. ಸ್ಥಳೀಯ ತೆರಿಗೆ ಆಧರಿಸಿ ಪೆಟ್ರೋಲ್, ಡೀಸೆಲ್ ಬೆಲೆಯು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಆಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.