ಬುಧವಾರ, ಮಾರ್ಚ್ 3, 2021
18 °C

ದೇಶದಾದ್ಯಂತ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶನಿವಾರ ದೇಶದಾದ್ಯಂತ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಏರಿಕೆ ಮಾಡಿವೆ.

ದೆಹಲಿಯಲ್ಲಿ ಪ್ರತಿ ಲೀಟರ್‌ ಮೇಲೆ 25 ಪೈಸೆ ಹೆಚ್ಚಿಸಿವೆ. ಇದರಿಂದಾಗಿ ಮಾರಾಟ ದರ ಒಂದು ಲೀಟರ್‌ ಪೆಟ್ರೋಲ್‌ ₹ 85.70 ಮತ್ತು ಡೀಸೆಲ್‌ ₹ 75.88ಕ್ಕೆ ಏರಿಕೆಯಾಗಿದೆ. ಈ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.

ಮುಂಬೈನಲ್ಲಿ ಲೀಟರ್‌ ಪೆಟ್ರೋಲ್‌ ದರ ₹ 92.28 ಮತ್ತು ಡೀಸೆಲ್‌ ದರ ₹  82.66ಕ್ಕೆ ಏರಿಕೆಯಾಗಿದೆ.

ವಾರದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ ಮಾಡಿದಂತಾಗಿದ್ದು, ಪ್ರತಿ ಲೀಟರ್‌ಗೆ ₹ 1 ರಷ್ಟು ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್‌ ದರ 26 ಪೈಸೆ ಹೆಚ್ಚಾಗಿ ₹ 88.59ಕ್ಕೆ ಹಾಗೂ ಡೀಸೆಲ್‌ ದರ 27 ಪೈಸೆ ಹೆಚ್ಚಾಗಿ ₹ 80.47ಕ್ಕೆ ಏರಿಕೆಯಾಗಿದೆ.

ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್‌ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಇಂಧನ ಮಾರಾಟ ದರದಲ್ಲಿ ವ್ಯತ್ಯಾಸ ಆಗುತ್ತದೆ.

ಸೌದಿ ಅರೇಬಿಯಾ ದೇಶವು ಕಚ್ಚಾ ತೈಲ ಉತ್ಪಾದನೆ ಕಡಿತ ಮಾಡಿರುವುದೇ ಇಂಧನ ದರ ಏರಿಕೆಗೆ ಕಾರಣ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಈಚೆಗಷ್ಟೇ ಹೇಳಿದ್ದರು. ಸೌದಿ ಅರೇಬಿಯಾ ದೇಶವು ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ದಿನಕ್ಕೆ 10 ಲಕ್ಷ ಬ್ಯಾರಲ್‌ಗಳಷ್ಟು ಉತ್ಪಾದನೆ ತಗ್ಗಿಸುವುದಾಗಿ ಹೇಳಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಮತ್ತು ವಿದೇಶಿ ವಿನಿಮಯ ದರಕ್ಕೆ ಅನುಗುಣವಾಗಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಪರಿಷ್ಕರಣೆ ಮಾಡಲಾಗುತ್ತದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು