ಭಾನುವಾರ, ಜೂನ್ 13, 2021
21 °C
ಮುಂಬೈನಲ್ಲಿ ₹ 100ರ ಸಮೀಪಕ್ಕೆ ಪೆಟ್ರೋಲ್‌ ದರ

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಹೆಚ್ಚಳ: ಮೇ 4ರ ನಂತರ 11 ಬಾರಿ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೇಶದಾದ್ಯಂತ ಮೇ 4ರಿಂದ ಇಲ್ಲಿಯವರೆಗೆ ಒಟ್ಟಾರೆ 11 ಬಾರಿ ಇಂಧನ ದರ ಹೆಚ್ಚಿಸಿವೆ. ಇದರಿಂದಾಗಿ ಪೆಟ್ರೋಲ್‌ ದರ ಲೀಟರಿಗೆ ₹ 2.64ರಷ್ಟು ಮತ್ತು ಡೀಸೆಲ್‌ ದರ ಲೀಟರಿಗೆ ₹ 3.07ರಷ್ಟು ಏರಿಕೆಯಾಗಿದೆ.

ಶುಕ್ರವಾರ ಪೆಟ್ರೋಲ್‌ ದರ ಲೀಟರಿಗೆ 19 ಪೈಸೆ ಮತ್ತು ಡೀಸೆಲ್‌ ದರ 29 ಪೈಸೆ ಹೆಚ್ಚಳವಾಗಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವು ನಗರಗಳಲ್ಲಿ ಈಗಾಗಲೇ ಪೆಟ್ರೋಲ್‌ ದರವು ಲೀಟರಿಗೆ ₹ 100ರ ಗಡಿ ದಾಟಿದೆ. ಶುಕ್ರವಾರದ ದರ ಏರಿಕೆಯ ಕಾರಣದಿಂದಾಗಿ ಮುಂಬೈನಲ್ಲಿಯೂ ಲೀಟರ್ ಪೆಟ್ರೋಲ್ ದರವು ₹ 100ರ ಸಮೀಪಕ್ಕೆ ಬಂದಿದೆ. ಮುಂಬೈನಲ್ಲಿ ಪೆಟ್ರೋಲ್‌ ದರ  ₹ 99.32 ಮತ್ತು ಡೀಸೆಲ್‌ ದರ ₹ 91.01ಕ್ಕೆ ತಲುಪಿದೆ.

ದೆಹಲಿಯಲ್ಲಿ ಪೆಟ್ರೋಲ್‌ ದರ ₹ 93.04 ಮತ್ತು ಡೀಸೆಲ್‌ ದರ ₹ 83.80ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ₹ 96.14 ಮತ್ತು ಡೀಸೆಲ್ ದರ ₹ 88.84ರಷ್ಟಾಗಿದೆ. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಪೆಟ್ರೋಲ್‌ ದರವು ಅತ್ಯಂತ ಗರಿಷ್ಠ ಮಟ್ಟದಲ್ಲಿ ಇದೆ. ಇಲ್ಲಿ ಪೆಟ್ರೋಲ್‌ ಬೆಲೆ ಲೀಟರ್‌ಗೆ ₹ 104ರಷ್ಟಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು