ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರವು ಪೆಟ್ರೋಲ್ ರಫ್ತಿನ ಮೇಲೆ ಶುಕ್ರವಾರ ಪ್ರತಿ ಲೀಟರ್ಗೆ ₹3ರಂತೆ ಆಕಸ್ಮಿಕ ಲಾಭ ತೆರಿಗೆಯನ್ನು ವಿಧಿಸಿದೆ. ಇದರ ಜೊತೆಗೆ ಡೀಸೆಲ್ ಮೇಲಿನ ಸುಂಕವನ್ನು ಲೀಟರ್ಗೆ ₹16.5ಕ್ಕೆ ಮತ್ತು ವಿಮಾನಕ್ಕೆ ಬಳಸುವ ಇಂಧನ ಮೇಲಿನ ಸುಂಕವನ್ನು ಲೀಟರ್ಗೆ ₹16ಕ್ಕೆ ಇಳಿಸಲು ನಿರ್ಧರಿಸಿದ್ದು, ಇದು ಮೇ 16ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಹಣಕಾಸು ಸಚಿವಾಲಯ, ‘ಪೆಟ್ರೋಲ್ ಮತ್ತು ಡೀಸೆಲ್ ರಫ್ತಿನ ಮೇಲಿನ ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಶೂನ್ಯವಾಗಿರಲಿದೆ’ ಎಂದು ತಿಳಿಸಿದೆ.

‘ದೇಶೀಯ ಮಾರುಕಟ್ಟೆಯಲ್ಲಿನ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಸಚಿವಾಲಯ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-1273033872

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.