ಶನಿವಾರ, ಫೆಬ್ರವರಿ 27, 2021
30 °C

ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಪೆಟ್ರೋಲ್ ಬೆಲೆ

ಪಿಟಿಐ Updated:

ಅಕ್ಷರ ಗಾತ್ರ : | |

DH FILE

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 25 ಪೈಸೆಯಷ್ಟು ಹೆಚ್ಚಿಸಿವೆ. ಇದರ ಪರಿಣಾಮವಾಗಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹ 85ರ ಸಮೀಪಕ್ಕೆ ಬಂದಿದೆ. ಮುಂಬೈನಲ್ಲಿ ಡೀಸೆಲ್ ಬೆಲೆಯು ₹ 82ರ ಸಮೀಪ ಬಂದಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 84.95ಕ್ಕೆ ತಲುಪಿದೆ. ಅಲ್ಲಿ ಡೀಸೆಲ್ ಬೆಲೆ ₹ 75.13 ಆಗಿದೆ. ಕಳೆದ ಮೂರು ದಿನಗಳಿಂದ ಇಂಧನ ದರದಲ್ಲಿ ಬದಲಾವಣೆ ಆಗಿರಲಿಲ್ಲ. ಜನವರಿ 13 ಮತ್ತು 14ರಂದು ಇಂಧನ ಬೆಲೆಯನ್ನು ಒಟ್ಟು 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಸೋಮವಾರ 26 ಪೈಸೆಯಷ್ಟು ಹೆಚ್ಚಳವಾಗಿದ್ದು, ₹ 87.82ಕ್ಕೆ ತಲುಪಿದೆ. ಡೀಸೆಲ್‌ ಬೆಲೆಯಲ್ಲಿ 27 ಪೈಸೆ ಜಾಸ್ತಿ ಆಗಿದ್ದು ₹ 79.67ಕ್ಕೆ ತಲುಪಿದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆಯು ₹ 91.56 ಆಗಿದೆ. ಡೀಸೆಲ್‌ ಬೆಲೆ ₹ 81.87ಕ್ಕೆ ತಲುಪಿದೆ. ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್–19 ಸಾಂಕ್ರಾಮಿಕಕ್ಕೆ ಲಸಿಕೆ ಬಿಡುಗಡೆ ಮಾಡಲಾಗಿದ್ದು, ಇಂಧನ ಬೇಡಿಕೆಯು ಹೆಚ್ಚಲಿದೆ ಎಂಬ ನಿರೀಕ್ಷೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಏರಿಕೆ ಆಗಿದೆ.

₹ 32.98

ಲೀಟರ್ ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕ

₹ 31.83

ಲೀಟರ್ ಡೀಸೆಲ್ ಮೇಲಿನ ಎಕ್ಸೈಸ್ ಸುಂಕ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು