ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ₹ 97ರ ಗಡಿ ದಾಟಿದ ಪೆಟ್ರೋಲ್

Last Updated 23 ಫೆಬ್ರುವರಿ 2021, 15:59 IST
ಅಕ್ಷರ ಗಾತ್ರ

ನವದೆಹಲಿ: ಎರಡು ದಿನಗಳ ವಿರಾಮದ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಮಂಗಳವಾರ ಮತ್ತೆ ಹೆಚ್ಚಳವಾಗಿದೆ. ಇದರ ಪರಿಣಾಮವಾಗಿ ಲೀಟರ್‌ ಪೆಟ್ರೋಲ್ ಬೆಲೆಯು ಮುಂಬೈನಲ್ಲಿ ₹ 97.34 ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹ 90.93ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ ₹ 93.98ಕ್ಕೆ, ಡೀಸೆಲ್ ₹ 86.21ಕ್ಕೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಮಂಗಳವಾರ 66 ಅಮೆರಿಕನ್ ಡಾಲರ್‌ ಗಡಿಯನ್ನು ದಾಟಿದೆ. ದೇಶಿ ಮಾರುಕಟ್ಟೆಯಲ್ಲಿ ಫೆಬ್ರುವರಿಯಲ್ಲಿ ಪೆಟ್ರೋಲ್ ಬೆಲೆಯು ₹ 4.63ರಷ್ಟು, ಡೀಸೆಲ್ ಬೆಲೆಯು ₹ 4.84ರಷ್ಟು ಹೆಚ್ಚಳವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT