ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ

Last Updated 30 ಮಾರ್ಚ್ 2021, 11:02 IST
ಅಕ್ಷರ ಗಾತ್ರ

ನವದೆಹಲಿ/ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ನಾಲ್ಕು ದಿನಗಳ ಅಂತರದ ಬಳಿಕ ಪೆಟ್ರೋಲ್‌, ಡೀಸೆಲ್‌ ದರವನ್ನು ಮತ್ತೆ ಇಳಿಕೆ ಮಾಡಿವೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ದರ 23 ಪೈಸೆ ಇಳಿಕೆಯಾಗಿ ₹ 93.59ರಂತೆ ಹಾಗೂ ಡೀಸೆಲ್‌ ದರ ಲೀಟರಿಗೆ 24 ಪೈಸೆ ಕಡಿಮೆಯಾಗಿ ₹ 85.75ರಂತೆ ಮಾರಾಟವಾಗಿದೆ.

ದೆಹಲಿಯಲ್ಲಿ ಪೆಟ್ರೋಲ್‌ ದರ 22 ಪೈಸೆ ಮತ್ತು ಡೀಸೆಲ್‌ ದರ 23 ಪೈಸೆ ಕಡಿಮೆಯಾಗಿ ಲೀಟರಿಗೆ ಕ್ರಮವಾಗಿ ₹ 90.56 ಮತ್ತು 80.87ರಂತೆ ಮಾರಾಟವಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ₹ 96.98 ಮತ್ತು ಡೀಸೆಲ್‌ ದರ ₹ 87.96ರಷ್ಟಾಗಿದೆ.

ಸೂಯೆಜ್ ಕಾಲುವೆಯಲ್ಲಿ ಸರಕು ಸಾಗಣೆ ಮತ್ತೆ ಆರಂಭವಾಗಿರುವುದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ತುಸು ಇಳಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT