ಇಳಿಸಿದ್ದ ತೆರಿಗೆ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ: ಪೆಟ್ರೋಲ್, ಡೀಸೆಲ್‌ ದುಬಾರಿ

7

ಇಳಿಸಿದ್ದ ತೆರಿಗೆ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ: ಪೆಟ್ರೋಲ್, ಡೀಸೆಲ್‌ ದುಬಾರಿ

Published:
Updated:

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ತೆರಿಗೆ ದರವನ್ನು ರಾಜ್ಯ ಸರ್ಕಾರ ಕ್ರಮವಾಗಿ ಶೇ 32 ಹಾಗೂ ಶೇ 21ಕ್ಕೆ ಪರಿಷ್ಕರಿಸಿದ್ದು, ಇದರಿಂದಾಗಿ ಈ ತೈಲಗಳ ಬೆಲೆ ಪ್ರತಿ ಲೀಟರ್‌ಗೆ ಸರಿಸುಮಾರು ₹2 ನಷ್ಟು ಹೆಚ್ಚಳವಾಗಿದ್ದು, ಹೊಸ ವರ್ಷದ ಆರಂಭದಲ್ಲೇ ಸರ್ಕಾರ ಗ್ರಾಹಕರಿಗೆ ಬರೆ ಹಾಕಿದೆ.

ಇದರ ನಡುವೆಯೂ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ತೈಲ ದರ ಕಡಿಮೆ ಇದೆ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ.

ಕಳೆದ ಎರಡೂವರೆ ತಿಂಗಳಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ನ ಮೂಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಇದು ರಾಜ್ಯದ ರಾಜಸ್ವ ಸಂಗ್ರಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.

ಹೀಗಾಗಿ, ತೆರಿಗೆ ಪರಿಷ್ಕರಣೆ ಅನಿವಾರ್ಯವಾಗಿತ್ತು ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 15

  Angry

Comments:

0 comments

Write the first review for this !