ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ಬೆಂಗಳೂರಲ್ಲಿ ಎಷ್ಟು? ಇಲ್ಲಿದೆ ಮಾಹಿತಿ

Last Updated 7 ಜನವರಿ 2021, 11:11 IST
ಅಕ್ಷರ ಗಾತ್ರ

ನವದೆಹಲಿ/ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬುಧವಾರ ಹೆಚ್ಚಿಸಿವೆ. ಈ ಹೆಚ್ಚಳದ ಪರಿಣಾಮವಾಗಿ ಪೆಟ್ರೋಲ್ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದ ಸನಿಹಕ್ಕೆ ಬಂದಿದೆ.

ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 26 ಪೈಸೆಯಷ್ಟು, ಡೀಸೆಲ್ ಬೆಲೆ 25 ಪೈಸೆಯಷ್ಟು ಹೆಚ್ಚಳ ಆಗಿದೆ. ದೆಹಲಿಯಲ್ಲಿ ಲೀಟರ್‌ ಪೆಟ್ರೋಲ್ ಬೆಲೆ ₹ 83.97ಕ್ಕೆ, ಡೀಸೆಲ್ ಬೆಲೆ ₹ 74.12ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 28 ಪೈಸೆ ಹೆಚ್ಚಾಗಿದೆ. ಲೀಟರ್‌ ಪೆಟ್ರೋಲ್‌ ₹ 86.79ಕ್ಕೆ, ಡೀಸೆಲ್ ₹ 78.59ಕ್ಕೆ ತಲುಪಿದೆ. ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ ಗರಿಷ್ಠ ಮಟ್ಟ ಮುಟ್ಟಿದ್ದು 2018ರ ಅಕ್ಟೋಬರ್‌ 4ರಂದು. ಪೆಟ್ರೋಲ್ ಬೆಲೆ ₹ 84 ಆಗಿತ್ತು.

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಆಲೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನವೂ ಪರಿಷ್ಕರಿಸಬೇಕಿದ್ದರೂ, ಕೋವಿಡ್–19 ಸಾಂಕ್ರಾಮಿಕ ಹರಡಿದ ನಂತರದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಆ ರೀತಿ ಮಾಡುತ್ತಿಲ್ಲ.

2020ರ ಮಾರ್ಚ್‌ನಲ್ಲಿ ಬೇಡಿಕೆ ಕುಸಿದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಆದಾಗ ಅದರ ಪ್ರಯೋಜನವನ್ನು ಕಂಪನಿಗಳು ಗ್ರಾಹಕರಿಗೆ ವರ್ಗಾಯಿಸಲಿಲ್ಲ. ಆದರೆ, ರಾಜ್ಯ ಸರ್ಕಾರಗಳು ಮಾರಾಟ ತೆರಿಗೆ ಹೆಚ್ಚಿಸಿದಾಗ ಕಂಪನಿಗಳು ಅದನ್ನು ಗ್ರಾಹಕರಿಗೆ ವರ್ಗಾವಣೆ ಮಾಡಿದವು. ಕೇಂದ್ರ ಸರ್ಕಾರವು ಎಕ್ಸೈಸ್ ಸುಂಕವನ್ನು ಹೆಚ್ಚಿಸಿದಾಗ, ಕಂಪನಿಗಳು ಅದನ್ನು ತೈಲ ಬೆಲೆ ಕುಸಿತದ ಜೊತೆ ಹೊಂದಿಸಿಕೊಂಡವು.

2020ರ ಮೇ ನಂತರ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆಯಲ್ಲಿ ₹ 14.28ರಷ್ಟು, ಲೀಟರ್ ಡೀಸೆಲ್ ಬೆಲೆಯಲ್ಲಿ ₹ 11.83ರಷ್ಟು ಹೆಚ್ಚಳ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT