ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ: ಬೆಂಗಳೂರಲ್ಲಿ ಎಷ್ಟಿದೆ?

Last Updated 23 ಅಕ್ಟೋಬರ್ 2021, 12:22 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಶನಿವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ.

ಶನಿವಾರದ ದರ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 110.94 ಮತ್ತು ಡೀಸೆಲ್‌ ದರ ಲೀಟರಿಗೆ ₹ 101.82ಕ್ಕೆ ಏರಿಕೆ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 107.24 ಮತ್ತು ಡೀಸೆಲ್‌ ದರ ಲೀಟರಿಗೆ ₹ 95.97ಕ್ಕೆ ಏರಿಕೆ ಆಗಿದೆ.

2020ರ ಮೇ ನಿಂದ ಇಲ್ಲಿಯವರೆಗೆ ಪೆಟ್ರೋಲ್‌ ದರ ಲೀಟರಿಗೆ ₹ 35.98 ರಷ್ಟು ಮತ್ತು ಡೀಸೆಲ್‌ ದರ ಲೀಟರಿಗೆ ₹ 26.58ರಷ್ಟು ಹೆಚ್ಚಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಅನುಗುಣವಾಗಿ ಕಂಪನಿಗಳು ದೇಶದಲ್ಲಿ ಇಂಧನ ದರ ಹೆಚ್ಚಿಸಿವೆ. ದೇಶದಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಸದ್ಯ ಗರಿಷ್ಠ ಮಟ್ಟದಲ್ಲಿವೆ. ಪ್ರಮುಖ ಎಲ್ಲ ನಗರಗಳಲ್ಲಿ ಪೆಟ್ರೋಲ್‌ ದರವು ಲೀಟರಿಗೆ ₹ 100ರ ಗಡಿ ದಾಟಿ ಮಾರಾಟವಾಗುತ್ತಿದೆ. 12ಕ್ಕೂ ಹೆಚ್ಚಿನ ರಾಜ್ಯಗಳಲ್ಲಿ ಡೀಸೆಲ್‌ ದರವು ಲೀಟರಿಗೆ ₹ 100ರ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT