ಸೋಮವಾರ, ಜುಲೈ 4, 2022
25 °C

ಇಂಧನ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಪೆಟ್ರೋಲಿಯಂ ಸಚಿವ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂಧನ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಗುರುವಾರ ಲೋಕಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಹರದೀಪ್, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ಆದರೂ ಜನರಿಗೆ ಕೈಗೆಟಕುವ ದರದಲ್ಲಿ ಇಂಧನ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.

ಏಪ್ರಿಲ್ 2021ರಿಂದ ಫೆಬ್ರುವರಿ 2022ರವರೆಗೆ ಹೋಲಿಸಿದರೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಬೆಲೆ ಶೇ 37ಕ್ಕಿಂತಲೂ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ ಬಿಕ್ಕಟ್ಟು, ವಿಶ್ವದ ಒಂದು ಕಡೆ ಮಿಲಿಟರಿ ದಾಳಿ (ಉಕ್ರೇನ್ ಮೇಲೆ ರಷ್ಯಾ ದಾಳಿ) ಹಾಗೂ ಅಸ್ಥಿರ ಪರಿಸ್ಥಿತಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಇಂಧನ ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಎಲ್‌ಪಿಜಿ ಬೆಲೆಗೆ ಸಂಬಂದಿಸಿದಂತೆ, ಸೌದಿಯ ಸಿಪಿ ಬೆಲೆ ಆಧರಿಸಿ ಏಪ್ರಿಲ್ 2020ರಿಂದ ಮಾರ್ಚ್ 2022ರವರೆಗೆ ಶೇ 285ರಷ್ಟು ಹೆಚ್ಚಳವಾಗಿದೆ. ಕಳೆದ ಆರು ತಿಂಗಳಲ್ಲೇ ಶೇ 37ರಷ್ಟು ಹೆಚ್ಚಾಗಿವೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು