ಮಂಗಳವಾರ, ಏಪ್ರಿಲ್ 20, 2021
27 °C

ಚಳಿಗಾಲದ ಬಳಿಕ ಪೆಟ್ರೋಲಿಯಂ ಬೆಲೆ ಕಡಿಮೆಯಾಗಲಿದೆ: ಸಚಿವ ಧರ್ಮೇಂದ್ರ ಪ್ರಧಾನ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Dharmendra Pradhan

ನವದೆಹಲಿ: ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ತುಸು ಇಳಿಕೆಯಾಗಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವುದು ಗ್ರಾಹಕರ ಮೇಲೂ ಪರಿಣಾಮ ಬೀರಿದೆ. ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆ ಸ್ವಲ್ಪ ಇಳಿಕೆಯಾಗಲಿದೆ. ಇದು ಅಂತರರಾಷ್ಟ್ರೀಯ ವಿಚಾರ. ಬೇಡಿಕೆ ಹೆಚ್ಚಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಚಳಿಗಾಲದಲ್ಲಿ ಹೀಗಾಗುತ್ತದೆ. ಬೆಲೆ ಇಳಿಕೆಯಾಗಲಿದೆ’ ಎಂದು ಅವರು ಹೇಳಿದ್ದಾರೆ.

ಓದಿ: 

ದೇಶದಲ್ಲಿ ಕಳೆದ ಕೆಲವು ವಾರಗಳಿಂದೀಚೆಗೆ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಬೆಲೆ ಏರಿಕೆಯಾಗುತ್ತಲೇ ಇದ್ದು, ₹100ರ ಸನಿಹ ತಲುಪಿದೆ. ಗುರುವಾರವಷ್ಟೇ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ₹25ರಷ್ಟು ಹೆಚ್ಚಳವಾಗಿತ್ತು. ಇದರೊಂದಿಗೆ ಫೆಬ್ರುವರಿಯಲ್ಲಿ ಒಟ್ಟು ಮೂರು ಬಾರಿ ಎಲ್‌ಪಿಜಿ ದರ ಹೆಚ್ಚಳ ಆದಂತಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು