ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಗಳು ಒಪ್ಪಿದರೆ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನ: ಕೇಂದ್ರ

Last Updated 15 ಫೆಬ್ರುವರಿ 2023, 16:09 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಗಳಿಗೆ ಒಪ್ಪಿಗೆಯಾದರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಜೆಟ್‌ ನಂತರದ ಸಂವಾದ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಆಡಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ನೈಸರ್ಗಿಕ ಅನಿಲ, ವಿಮಾನ ಇಂಧನ ಜಿಎಸ್‌ಟಿ ವ್ಯಾಪ್ತಿಯಲ್ಲಿ ಇಲ್ಲ. ಇವುಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಯಾವತ್ತಿನಿಂದ ತರಬೇಕು ಎಂಬ ತೀರ್ಮಾನ ಕೈಗೊಳ್ಳುವ ಅಧಿಕಾರ ಜಿಎಸ್‌ಟಿ ಮಂಡಳಿಗೆ ಇದೆ.

‘ರಾಜ್ಯಗಳು ಒಪ್ಪಿಕೊಂಡ ನಂತರದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತವೆ’ ಎಂದು ನಿರ್ಮಲಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT