ಶನಿವಾರ, ಅಕ್ಟೋಬರ್ 16, 2021
23 °C

ಪಿಯೆಜಿಯೊ ಹೊಸ ಷೋರೂಂ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಯೆಜಿಯೊ ವೆಹಿಕಲ್ಸ್‌ ಪ್ರೈವೇಟ್ ಲಿಮಿಟೆಡ್‌ನ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳ ಹೊಸ ಷೋರೂಂ ನಗರದ ಬಿ. ಚನ್ನಸಂದ್ರದಲ್ಲಿ ಆರಂಭವಾಗಿದೆ. ಮೊಬಿಲಿಟಿ ಮೋಟರ್ಸ್‌ನ ಸಹಭಾಗಿತ್ವದಲ್ಲಿ ಈ ಷೋರೂಂ ಆರಂಭವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

‘ಕಂಪನಿಯ ಷೋರೂಂ ಉದ್ಘಾಟಿಸುತ್ತಿರುವುದು ಸಂತಸ ತಂದಿದೆ. ರಾಜ್ಯ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಜನಪ್ರಿಯಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿದೆ’ ಎಂದು ಬುಧವಾರ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.