ಭಾನುವಾರ, ಜುಲೈ 3, 2022
27 °C

₹ 1,000 ಕೋಟಿ ಮೊತ್ತದ ಸ್ಟಾರ್ಟ್‌ಅಪ್‌ ಇಂಡಿಯಾ ಸೀಡ್‌ ಫಂಡ್‌: ಮೋದಿ ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನವೋದ್ಯಮಗಳ ಅನುಕೂಲಕ್ಕಾಗಿ ₹ 1 ಸಾವಿರ ಕೋಟಿ ಮೊತ್ತದ ‘ಸ್ಟಾರ್ಟ್‌ಅಪ್ ಇಂಡಿಯಾ ಸೀಡ್‌ ಫಂಡ್‌’ ಆರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಘೋಷಿಸಿದ್ದಾರೆ.

ನವೋದ್ಯಮಗಳಿಗೆ ಆರಂಭಿಕ ಬಂಡವಾಳ ಒದಗಿಸಲು ಇದನ್ನು ಜಾರಿಗೊಳಿಸಲಾಗುತ್ತಿದೆ. ಹೊಸ ನವೋದ್ಯಮಗಳನ್ನು ಸ್ಥಾಪಿಸಲು ಮತ್ತು ಅವುಗಳ ಬೆಳವಣಿಗೆಗೆ ಈ ನಿಧಿಯು ನೆರವಾಗಲಿದೆ ಎಂದು ಅವರು ವಿವರಿಸಿದ್ದಾರೆ.

‘ಪ್ರಾರಂಭ: ಸ್ಟಾರ್ಟ್‌ಅಪ್‌ ಇಂಡಿಯಾ ಇಂಟರ್‌ನ್ಯಾಷನಲ್‌ ಸಮಿತ್‌’ ಉದ್ದೇಶಿಸಿ ಮಾತನಾಡಿದ ಅವರು, ನವೋದ್ಯಮಗಳ ಬೆಳವಣಿಗೆಯಿಂದಾಗಿ ಉದ್ಯೋಗ ಸೃಷ್ಟಿ ಮತ್ತು ನಿರ್ದಿಷ್ಟ ಪ್ರದೇಶದ ಜನರ ಜೀವನ ಮಟ್ಟದಲ್ಲಿ ಸುಧಾರಣೆ ಆಗುವ ವಿಶ್ವಾಸವಿದೆ ಎಂದಿದ್ದಾರೆ.

ಸ್ಟಾರ್ಟ್‌ಅಪ್‌ ಇಂಡಿಯಾ ಕೇವಲ ದೊಡ್ಡ ನಗರಗಳಿಗಷ್ಟೇ ಸೀಮಿತವಾಗಿಲ್ಲ. ಶೇ 40ರಷ್ಟು ಉದ್ಯಮಿಗಳು ಎರಡು ಮತ್ತು ಮೂರನೇ ಶ್ರೇಣಿಯ ನಗರಗಳಿಗೆ ಸೇರಿದವರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು