ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಚರ್ಚೆ: ತಜ್ಞರೊಂದಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸಭೆ

Last Updated 9 ಜನವರಿ 2023, 19:45 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕ ತಜ್ಞರು ಮತ್ತು ವಿವಿಧ ವಲಯಗಳ ತಜ್ಞರೊಂದಿಗೆ ಶುಕ್ರವಾರ ಬಜೆಟ್‌ ಪೂರ್ವ ಸಭೆ ನಡೆಸಲಿದ್ದಾರೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆಯು ಶೇ 7ಕ್ಕಿಂತ ಕೆಳಗಿಳಿಯುವ ಅಂದಾಜು ಇದೆ. ಹೀಗಾಗಿ ಆರ್ಥಿಕ ಸ್ಥಿತಿಗತಿಯ ಕುರಿತು ಚರ್ಚಿಸಲು ಮತ್ತು ಬೆಳವಣಿಗೆಯನ್ನು ಹೆಚ್ಚಿಸಲು ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು
ಹೇಳಿದ್ದಾರೆ.

ಬೇಡಿಕೆ ತಗ್ಗಿರುವುದರಿಂದ 2023ರ ಮಾರ್ಚ್‌ಗೆ ಅಂತ್ಯವಾಗಲಿರುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕ ಬೆಳವಣಿಗೆಯು ಶೇ 7ಕ್ಕಿಂತ ಕಡಿಮೆ ಇರುವ ನಿರೀಕ್ಷೆ ಇದೆ. ಹಾಗಾದಲ್ಲಿ, ಪ್ರಮುಖ ದೇಶಗಳ ಪೈಕಿ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆ ಎಂಬ ಹೆಗ್ಗಳಿಕೆ ಭಾರತಕ್ಕೆ ಇಲ್ಲವಾಗುವ ಸಾಧ್ಯತೆ ಇದೆ.

ಸೌದಿಗಿಂತ ಕಡಿಮೆ?: ಜಿಡಿಪಿ ಶೇ 8–8.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸರ್ಕಾರ ಈ ಮೊದಲು ಅಂದಾಜಿಸಿತ್ತು. ಆದರೆ, ಶೇ 6.8ರಷ್ಟು ಆಗಲಿದೆ ಎಂದು ಆರ್‌ಬಿಐ ಅಂದಾಜು ಮಾಡಿದೆ. ಒಂದೊಮ್ಮೆ ಜಿಡಿಪಿ ಬೆಳವಣಿಗೆ ಶೇ 7ಕ್ಕಿಂತಲೂ ಕಡಿಮೆ ಆದಲ್ಲಿ, ಸೌದಿ ಅರೇಬಿಯಾದ ಆರ್ಥಿಕ ಬೆಳವಣಿಗೆಯ ಅಂದಾಜಿಗಿಂತಲೂ (ಶೇ 7.6) ಕಡಿಮೆ ಆಗಲಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಅಂದಾಜು ಮಾಡಿರುವ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ 7ರಷ್ಟು ಆಗಲಿದೆ. 2021–22ರಲ್ಲಿ ಶೇ 8.7ರಷ್ಟು ಇತ್ತು.

ಜುಲೈ–ಸೆಪ್ಟೆಂಬರ್‌ ಅವಧಿಯಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ6.3ರಷ್ಟು ಆಗಿದೆ. ಇದೇ ಅವಧಿಯಲ್ಲಿ ಸೌದಿ ಅರೇಬಿಯಾದ ಜಿಡಿಪಿ ಶೇ8.7ರಷ್ಟು ಬೆಳವಣಿಗೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT