ಶನಿವಾರ, ಜೂನ್ 19, 2021
29 °C

ಬೀದಿಬದಿ ವ್ಯಾಪಾರಿಗಳಿಗೆ ಸಾಲ: ‘ಸ್ವನಿಧಿ’ ಆ್ಯಪ್‌ಗೆ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಪಿಎಂ ಸ್ವನಿಧಿ’ ಯೋಜನೆಯ ಅಡಿ ಬೀದಿಬದಿ ವ್ಯಾಪಾರಿಗಳು ಸಾಲ ಕೋರಿ ಸಲ್ಲಿಸುವ ಅರ್ಜಿಗಳನ್ನು ನಗರ ಸ್ಥಳೀಯ ಸಂಸ್ಥೆಗಳು ಸ್ವೀಕರಿಸಲು ಅನುವು ಮಾಡಿಕೊಡುವ ಆ್ಯಪ್‌ಗೆ ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಬುಧವಾರ ಚಾಲನೆ ನೀಡಿದರು.

ರಾಜ್ಯಗಳ ನಗರಾಭಿವೃದ್ಧಿ ಸಚಿವರ ಜೊತೆ ನಡೆದ ಸಂವಾದದ ಸಂದರ್ಭದಲ್ಲಿ ಪುರಿ ಅವರು ಈ ಆ್ಯಪ್‌ಗೆ ಚಾಲನೆ ನೀಡಿದರು ಎಂದು ಪ್ರಕಟಣೆ ತಿಳಿಸಿದೆ. ‘ಪಿಎಂ ಸ್ವನಿಧಿ’ ಯೋಜನೆಯ ಫಲಾನುಭವಿಗಳಿಗೆ ಪಿಎಂ ಆವಾಸ್ ಯೋಜನೆ (ನಗರ), ಆಯುಷ್ಮಾನ್ ಭಾರತ, ಉಜ್ವಲ ಯೋಜನೆ, ಜನಧನ ಯೋಜನೆ ಸೇರಿದಂತೆ ಇತರ ಯೋಜನೆಗಳ ಅಡಿ ನೆರವು ವಿಸ್ತರಿಸುವ ಉದ್ದೇಶದಿಂದ ಅವರ ಸಮಾಜೋಆರ್ಥಿಕ ಮಾಹಿತಿ ಸಂಗ್ರಹಿಸುವ ತೀರ್ಮಾನವನ್ನೂ ಈ ಸಂದರ್ಭದಲ್ಲಿ ಕೈಗೊಳ್ಳಲಾಗಿದೆ.

‘ಪಿಎಂ ಸ್ವನಿಧಿ’ ಯೋಜನೆಯ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳು ₹ 10 ಸಾವಿರದವರೆಗೆ ದುಡಿಯುವ ಬಂಡವಾಳದ ರೂಪದಲ್ಲಿ ಸಾಲ ಪಡೆಯಬಹುದು. ಇದನ್ನು ಒಂದು ವರ್ಷದ ಅವಧಿಯಲ್ಲಿ ಕಂತುಗಳ ರೂಪದಲ್ಲಿ ಮರುಪಾವತಿ ಮಾಡಬಹುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.