ಶನಿವಾರ, ಜುಲೈ 2, 2022
26 °C

ಎಟಿಎಂ ವಹಿವಾಟು ಶುಲ್ಕದಿಂದ ₹ 645 ಕೋಟಿ ವರಮಾನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂ ವಹಿವಾಟು ಶುಲ್ಕದ ಮೂಲಕ 2021–22ನೇ ಹಣಕಾಸು ವರ್ಷದಲ್ಲಿ ₹ 645 ಕೋಟಿ ವರಮಾನ ಗಳಿಸಿದೆ.

ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಕೇಳಿದ್ದ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಬ್ಯಾಂಕ್ ಈ ವಿವರ ನೀಡಿದೆ. ಖಾತೆಯಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳಲು ಸಾಧ್ಯವಾಗದ ಗ್ರಾಹಕರಿಗೆ ದಂಡ ವಿಧಿಸುವ ಮೂಲಕ ₹ 239 ಕೋಟಿ ಸಂಗ್ರಹಿಸಲಾಗಿದೆ ಎಂದು ಅದು ತಿಳಿಸಿದೆ.

2020–21ರಲ್ಲಿಯೂ ಕನಿಷ್ಠ ಮೊತ್ತ ಕಾಯ್ದುಕೊಳ್ಳದ ಗ್ರಾಹಕರಿಗೆ ದಂಡ ವಿಧಿಸುವ ಮೂಲಕ ₹ 170 ಕೋಟಿಯನ್ನು ಬ್ಯಾಂಕ್ ಸಂಗ್ರಹಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು