ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಕೋಳಿ ಮಾಂಸ, ಮೊಟ್ಟೆ ಉತ್ಪಾದನೆ ಏರಿಕೆ

Published 21 ಜೂನ್ 2024, 16:03 IST
Last Updated 21 ಜೂನ್ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 2022–23ನೇ ಆರ್ಥಿಕ ವರ್ಷದಲ್ಲಿ ಮೊಟ್ಟೆ ಉತ್ಪಾದನೆಯು ಶೇ 33ರಷ್ಟು ಹಾಗೂ ಕೋಳಿ ಮಾಂಸದ ಉತ್ಪಾದನೆಯಲ್ಲಿ ಶೇ 32.5ರಷ್ಟು ಏರಿಕೆಯಾಗಿದೆ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ತಿಳಿಸಿದೆ. 

2018–19ರಲ್ಲಿ ಉತ್ಪಾದನೆಯಾಗಿದ್ದಕ್ಕಿಂತಲೂ ಇದು ಹೆಚ್ಚಿದೆ. ನಗರ ಪ್ರದೇಶಗಳಲ್ಲಿ ಬೇಡಿಕೆ ಹೆಚ್ಚಳವೇ ಈ ಏರಿಕೆಗೆ ಕಾರಣವಾಗಿದೆ ಎಂದು ತಿಳಿಸಿದೆ. 

ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ರಾಯ್ಲರ್‌ ಕೋಳಿಗಳ ಉತ್ಪಾದನೆ ಹೆಚ್ಚಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಮೊಟ್ಟೆಗಳ ಉತ್ಪಾದನೆಯಲ್ಲಿ ಏರಿಕೆಯಾಗಿದೆ. 2023ರಲ್ಲಿ ಒಟ್ಟು 90 ಲಕ್ಷ ಮೊಟ್ಟೆಗಳು ಉತ್ಪಾದನೆಯಾಗಿದ್ದರೆ, 1.79 ಲಕ್ಷ ಟನ್‌ನಷ್ಟು ಮಾಂಸದ ಉತ್ಪಾದನೆಯಾಗಿದೆ ಎಂದು ವಿವರಿಸಿದೆ.

‘ಕೆಲವು ವರ್ಷಗಳಿಂದ ನಗರ ಪ್ರದೇಶಗಳಲ್ಲಿ ಮೊಟ್ಟೆ ಮತ್ತು ಮಾಂಸಕ್ಕೆ ಬೇಡಿಕೆ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಕುಟುಂಬಗಳು ವಾರಕ್ಕೆ 2ರಿಂದ 3 ಬಾರಿ ಕೋಳಿ ಮಾಂಸ ಖರೀದಿಸುವುದು ಹೆಚ್ಚುತ್ತಿದೆ’ ಎಂದು ಕೋಳಿ ಸಾಕಾಣಿಕೆದಾರ ಕೆ.ಎಸ್. ಅಶೋಕ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT