ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ ದರ ಏರಿಕೆ: ಪ್ರತಿ ಸಿಲಿಂಡರ್‌ಗೆ ₹ 50 ಹೆಚ್ಚಳ

Last Updated 14 ಫೆಬ್ರುವರಿ 2021, 16:37 IST
ಅಕ್ಷರ ಗಾತ್ರ

ನವದೆಹಲಿ: ಅಡುಗೆ ಅನಿಲ (ಎಲ್‌ಪಿಜಿ) ದರವನ್ನು ಪ್ರತಿ ಸಿಲಿಂಡರ್‌ಗೆ ₹ 50ರಷ್ಟು ಹೆಚ್ಚಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ದೆಹಲಿಯಲ್ಲಿ ₹ 719 ಇದ್ದ 14.2ಕೆ.ಜಿ ಸಿಲಿಂಡರ್‌ನ ದರ ಸೋಮವಾರ ಬೆಳಿಗ್ಗೆ 12ರಿಂದ ₹769ಕ್ಕೆ ಏರಿಕೆಯಾಗಲಿದೆ.

ದೇಶದಾದ್ಯಂತ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆಯಾಗುತ್ತಲೇ ಸಾಗಿದೆ. ಇದು ಎಲ್‌ಪಿಜಿ ದರದ ಮೇಲೆ ಪರಿಣಾಮ ಬೀರಿದೆ.

ದೆಹಲಿಯಲ್ಲಿ ಪೆಟ್ರೋಲ್‌ ದರ ₹88.41 ಕ್ಕೆ ತಲುಪಿದ್ದರೆ, ಡೀಸೆಲ್‌ ದರ ₹78.74 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್‌ ₹94.93 ಹಾಗೂ ಡೀಸೆಲ್‌ ₹85.70 ರಷ್ಟಿದೆ.

ಕಳೆದ ಒಂದು ವಾರದಲ್ಲಿ ಪೆಟ್ರೋಲ್‌ ಪ್ರತಿ ಲೀಟರ್‌ಗೆ ₹1.51 ಪೈಸೆ, ಡೀಸೆಲ್‌ ಪ್ರತಿ ಲೀಟರ್‌ಗೆ ₹1.56 ಪೈಸೆ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹91.09 ಆಗಿದ್ದು, ಡೀಸೆಲ್ ದರ ಪ್ರತಿ ಲೀಟರ್‌ಗೆ ₹83.09 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT