ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿ ಭಾರತೀಯ ದಿವಸ್ ವಸ್ತುಪ್ರದರ್ಶನ ಉದ್ಘಾಟನೆ

Last Updated 10 ಜನವರಿ 2023, 16:00 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್‌ ಕಾರ್ಯಕ್ರಮದಲ್ಲಿ ‘ಪ್ರವಾಸಿ ಭಾರತೀಯ ದಿವಸ್ ವಸ್ತುಪ್ರದರ್ಶನ’ವನ್ನು ಉದ್ಘಾಟಿಸಿದರು.

‘ಸ್ವಾತಂತ್ರ್ಯದ ಅಮೃತ ಮಹೋತ್ಸವ – ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ’ ಎಂಬುದು ಈ ಡಿಜಿಟಲ್ ವಸ್ತುಪ್ರದರ್ಶನದ ಮುಖ್ಯ ಅಂಶ. ಈ ಬಗೆಯ ವಸ್ತುಪ್ರದರ್ಶನ ಆಯೋಜನೆ ಆಗಿರುವುದು ಇದೇ ಮೊದಲು ಎಂದು ಪ್ರಕಟಣೆ ತಿಳಿಸಿದೆ.

ಈ ವಸ್ತುಪ್ರದರ್ಶನದಲ್ಲಿ, ಅನಿವಾಸಿ ಭಾರತೀಯರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಯನ್ನು ಬಹಳ ಸ್ಪಷ್ಟವಾಗಿ ತೋರಿಸಲಾಗಿದೆ ಎಂದು ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗಯಾನಾ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ, ಸುರುನಾಮ್ ಅಧ್ಯಕ್ಷ ಚಂದ್ರಿಕಾ ಪ್ರಸಾದ್ ಸಂತೋಖಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT