ಶುಕ್ರವಾರ, ಜೂನ್ 25, 2021
29 °C

ವಿಮಾನ ನಿಲ್ದಾಣಗಳ ಖಾಸಗೀಕರಣ: ಸಚಿವ ಹರದೀಪ್ ಸಿಂಗ್ ಪುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಮಾನ ನಿಲ್ದಾಣಗಳನ್ನು ಇನ್ನಷ್ಟು ಖಾಸಗೀಕರಣಗೊಳಿಸುವ ಪ್ರಸ್ತಾವನೆಯೊಂದನ್ನು ನಾಗರಿಕ ವಿಮಾನಯಾನ ಸಚಿವಾಲಯವು ಕೇಂದ್ರ ಸಚಿವ ಸಂಪುಟದ ಮುಂದೆ ಬುಧವಾರ ಇರಿಸಲಿದೆ ಎಂದು ಸಚಿವ ಹರದೀಪ್ ಸಿಂಗ್ ಪುರಿ ತಿಳಿಸಿದರು. 

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮೊದಲ ಸುತ್ತಿನ ಖಾಸಗೀಕರಣ ಪ್ರಕ್ರಿಯೆಯ ಅಡಿಯಲ್ಲಿ ಲಖನೌ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಯನ್ನು ಪಿಪಿಪಿ (ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವ) ಮಾದರಿಯಲ್ಲಿ ನಿಭಾಯಿಸಲು ಅನುಮತಿ ನೀಡಿತ್ತು.

ಇದೇ ರೀತಿ, ಅಮೃತಸರ, ವಾರಾಣಸಿ, ಭುವನೇಶ್ವರ, ಇಂದೋರ್, ರಾಯಪುರ ಮತ್ತು ತಿರುಚಿ ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು (ಎಎಐ) ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 2019ರ ಸೆಪ್ಟೆಂಬರ್‌ನಲ್ಲಿ ಶಿಫಾರಸು ಮಾಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.