ಭಾನುವಾರ, ಜೂನ್ 26, 2022
21 °C

ಗರಿಷ್ಠ ತಾಪಮಾನದಿಂದ ಆರ್ಥಿಕ ಬೆಳವಣಿಗೆಗೆ ಅಡ್ಡಿ: ಮೂಡಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ತಾಪಮಾನ ಗರಿಷ್ಠ ಮಟ್ಟದಲ್ಲಿ ಇರುವುದು ಭಾರತದಲ್ಲಿ ಹಣದುಬ್ಬರವನ್ನು ಇನ್ನಷ್ಟು ಹೆಚ್ಚಾಗುವಂತೆ ಮಾಡಲಿದ್ದು, ಆರ್ಥಿಕ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮೂಡಿಸ್‌ ಇನ್‌ವೆಸ್ಟರ್ಸ್‌ ಸರ್ವೀಸ್‌ ಸೋಮವಾರ ಹೇಳಿದೆ.

ಬಿಸಿ ಗಾಳಿಯು ಭಾರತದಲ್ಲಿ ಸಾಮಾನ್ಯವಾಗಿದ್ದು, ಮೇ ಮತ್ತು ಜೂನ್‌ನಲ್ಲಿ ಬೀಸುತ್ತದೆ. ಆದರೆ, ದೆಹಲಿಯಲ್ಲಿ ಮೇ ತಿಂಗಳ ಗರಿಷ್ಠ ತಾಪಮಾನವು ಈ ಬಾರಿ 49 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ತಾಪಮಾನವು ಗರಿಷ್ಠ ಮಟ್ಟದಲ್ಲಿ ಇರುವುದರಿಂದ ವಾಯವ್ಯ ಭಾಗದಲ್ಲಿ ಹೆಚ್ಚಿನ ಪರಿಣಾಮ ಉಂಟಾಗಲಿದ್ದು, ಗೋಧಿ ಉತ್ಪಾದನೆ ಕಡಿಮೆ ಆಗುತ್ತದೆ. ವಿದ್ಯುತ್‌ ಸಂಪರ್ಕ ಕಡಿತಕ್ಕೂ ಕಾರಣವಾಗುತ್ತದೆ. ಈಗಾಗಲೇ ಗರಿಷ್ಠ ಮಟ್ಟದಲ್ಲಿ ಇರುವ ಹಣದುಬ್ಬರವು ಇನ್ನಷ್ಟು ಹೆಚ್ಚಾಗಲಿದ್ದು, ಆರ್ಥಿಕ ಬೆಳವಣಿಗೆಗೆ ಅಡ್ಡಿಯುಂಟು ಮಾಡುತ್ತದೆ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು