ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾರ್ವಜನಿಕ ಬ್ಯಾಂಕ್‌ಗಳಿಗೆ ₹1.41 ಲಕ್ಷ ಕೋಟಿ ಲಾಭ

Published 14 ಮೇ 2024, 14:13 IST
Last Updated 14 ಮೇ 2024, 14:13 IST
ಅಕ್ಷರ ಗಾತ್ರ

ನವದೆಹಲಿ: 2023–24ನೇ ಆರ್ಥಿಕ ವರ್ಷದಲ್ಲಿ ದೇಶದ ಸಾರ್ವಜನಿಕ ವಲಯದ 12 ಬ್ಯಾಂಕ್‌ಗಳು, ₹1.41 ಲಕ್ಷ ಕೋಟಿ ನಿವ್ವಳ ಲಾಭ ಗಳಿಸಿವೆ.

2022–23ನೇ ಆರ್ಥಿಕ ವರ್ಷದಲ್ಲಿ ₹1.04 ಲಕ್ಷ ಕೋಟಿ ಲಾಭಗಳಿಸಿದ್ದವು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 35ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಎಸ್‌ಬಿಐ) ಪಾಲು ಶೇ 40ಕ್ಕೂ ಹೆಚ್ಚಿದೆ.

2023–24ನೇ ಪೂರ್ಣ ಆರ್ಥಿಕ ವರ್ಷದಲ್ಲಿ ಎಸ್‌ಬಿಐ ₹61,077 ಕೋಟಿ ಲಾಭಗಳಿಸಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 22ರಷ್ಟು ಹೆಚ್ಚಳವಾಗಿದೆ. 

ಆದರೆ, ಶೇಕಡಾವಾರು ಲೆಕ್ಕಾಚಾರದಲ್ಲಿ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನ ನಿವ್ವಳ ಲಾಭದಲ್ಲಿ ಶೇ 228ರಷ್ಟು ಏರಿಕೆಯಾಗಿದ್ದು, ₹8,245 ಕೋಟಿ ಗಳಿಸಿದೆ. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ₹13,649 ಕೋಟಿ (ಶೇ 62ರಷ್ಟು) ಹಾಗೂ ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ ₹2,549 ಕೋಟಿ (ಶೇ 61ರಷ್ಟು) ಲಾಭ ಗಳಿಸಿವೆ.

ಬ್ಯಾಂಕ್‌ ಆಫ್‌ ಇಂಡಿಯಾ ₹6,318 ಕೋಟಿ (ಶೇ 57ರಷ್ಟು), ಬ್ಯಾಂಕ್‌ ಆಫ್ ಮಹಾರಾಷ್ಟ್ರ ₹4,055 ಕೋಟಿ (ಶೇ 56ರಷ್ಟು) ಹಾಗೂ ಇಂಡಿಯನ್‌ ಬ್ಯಾಂಕ್‌ ₹8,063 ಕೋಟಿ (ಶೇ 53ರಷ್ಟು) ಲಾಭಗಳಿಸಿವೆ. ಈ ಕುರಿತು ಬ್ಯಾಂಕ್‌ಗಳು ಷೇರು‍ಪೇಟೆಗೆ ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT