ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌: 100 ಹೊಸ ಶಾಖೆ ಸ್ಥಾಪನೆ

Published 7 ಜುಲೈ 2024, 14:23 IST
Last Updated 7 ಜುಲೈ 2024, 14:23 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಬ್ಯಾಂಕ್‌ನ ವಹಿವಾಟು ವಿಸ್ತರಣೆಯ ಭಾಗವಾಗಿ ಸರ್ಕಾರಿ ಸ್ವಾಮ್ಯದ ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೊಸದಾಗಿ 100 ಶಾಖೆಗಳು ಮತ್ತು 100 ಎಟಿಎಂಗಳನ್ನು ತೆರೆಯಲು ನಿರ್ಧರಿಸಿದೆ.

ಹೊಸ ಶಾಖೆ ಆರಂಭಿಸುವುದರಿಂದ ಬ್ಯಾಂಕ್‌ನ ಒಟ್ಟು ಶಾಖೆಗಳ ಸಂಖ್ಯೆ 1,665ಕ್ಕೆ  ಮುಟ್ಟಲಿದೆ. ಒಟ್ಟು ಎಟಿಎಂ ಸಂಖ್ಯೆ 1,135ಕ್ಕೆ ತಲುಪಲಿದೆ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸ್ವರೂಪ್‌ ಕುಮಾರ್‌ ಸಹಾ ತಿಳಿಸಿದ್ದಾರೆ.

ಗ್ರಾಮೀಣ ಆರ್ಥಿಕತೆಯ ಪರಿವರ್ತನೆಯಲ್ಲಿ ವ್ಯಾಪಾರ ಕರೆಸ್ಪಾಂಡೆಂಟ್‌ಗಳ ಪಾತ್ರ ಹೆಚ್ಚಿದೆ. ಈ ಸೇವೆಯ ವಿಸ್ತರಣೆಗೆ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.

₹2 ಸಾವಿರ ಕೋಟಿ ಸಂಗ್ರಹ: ವಹಿವಾಟು ಬೆಳವಣಿಗೆಗಾಗಿ ಅರ್ಹ ಸಾಂಸ್ಥಿಕ ಹೂಡಿಕೆದಾರರ (ಕ್ಯೂಐಪಿ) ಮೂಲಕ ಪ್ರಸಕ್ತ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ₹2 ಸಾವಿರ ಕೋಟಿ ಸಂಗ್ರಹಿಸಲು ಬ್ಯಾಂಕ್‌ ತೀರ್ಮಾನಿಸಿದೆ. ಇದಕ್ಕೆ ಆಡಳಿತ ಮಂಡಳಿಯು ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

ಮಾರುಕಟ್ಟೆಯ ಸ್ಥಿತಿ ಆಧರಿಸಿ ಮೂರನೇ ತ್ರೈಮಾಸಿಕದ ವೇಳೆಗೆ ಬಂಡವಾಳ ಸಂಗ್ರಹಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಮಾರ್ಚ್‌ ಅಂತ್ಯಕ್ಕೆ ಬ್ಯಾಂಕ್‌ಗಳ ಸುರಕ್ಷತೆಯ ಮಾನದಂಡವಾದ ಬಂಡವಾಳ ಪರ್ಯಾಪ್ತತಾ ಅನುಪಾತ (ಸಿಆರ್‌ಎಆರ್‌) ಶೇ 17.10ರಷ್ಟಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT