ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣಿಕ ವಾಹನ ಮಾರಾಟ ಹೆಚ್ಚಳ

Last Updated 13 ಏಪ್ರಿಲ್ 2023, 14:37 IST
ಅಕ್ಷರ ಗಾತ್ರ

ನವದೆಹಲಿ: ಪ್ರಯಾಣಿಕ ವಾಹನಗಳ ಸಗಟು ಮಾರಾಟವು 2022–23ನೇ ಹಣಕಾಸು ವರ್ಷದಲ್ಲಿ ದಾಖಲೆಯ 38.9 ಲಕ್ಷಕ್ಕೆ ತಲುಪಿದ್ದು, 2021–22ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 26.73ರಷ್ಟು ಹೆಚ್ಚಳ ಆಗಿದೆ ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟ (ಎಸ್‌ಐಎಎಂ) ಮಾಹಿತಿ ನೀಡಿದೆ.

2021–22ನೇ ಹಣಕಾಸು ವರ್ಷದಲ್ಲಿ 30.69 ಲಕ್ಷ ವಾಹನಗಳು ಮಾರಾಟ ಆಗಿದ್ದವು. ಈ ಹಿಂದೆ 2018–19ರಲ್ಲಿ ಪ್ರಯಾಣಿಕ ವಾಹನ ಮಾರಾಟವು ದಾಖಲೆಯ 33.77 ಲಕ್ಷಗೆ ತಲುಪಿತ್ತು.

ವಾಣಿಜ್ಯ ವಾಹನ ಮಾರಾಟ 7.16 ಲಕ್ಷದಿಂದ 9.62 ಲಕ್ಷಕ್ಕೆ ಏರಿಕೆ ಆಗಿದೆ. ದ್ವಿಚಕ್ರ ವಾಹನ ಮಾರಾಟ ಶೇ 17ರಷ್ಟು ಹೆಚ್ಚಾಗಿದೆ. ಎಲ್ಲಾ ವಿಭಾಗಗಳನ್ನು ಒಳಗೊಂಡು ಒಟ್ಟಾರೆ ಮಾರಾಟ 1.76 ಕೋಟಿಯಿಂದ 2.12 ಕೋಟಿಗೆ ಶೇ 20.36ರಷ್ಟು ಹೆಚ್ಚಾಗಿದೆ.

ವಾಣಿಜ್ಯ ವಾಹನಗಳು, ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ವಿಭಾಗದ ಮಾರಾಟವು ಇನ್ನಷ್ಟೇ ಕೋವಿಡ್‌ ಪೂರ್ವದ ಮಟ್ಟವನ್ನು ತಲುಪಬೇಕಿದೆ ಎಂದು ಒಕ್ಕೂಟದ ಪ್ರಧಾನ ನಿರ್ದೇಶಕ ರಾಜೇಶ್ ಮೆನನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT