ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಯಲ್‌ ಎಸ್ಟೇಟ್‌ನಲ್ಲಿ ಖಾಸಗಿ ಷೇರು ಹೂಡಿಕೆ ಶೇ 85ರಷ್ಟು ಇಳಿಕೆ

Last Updated 23 ಸೆಪ್ಟೆಂಬರ್ 2020, 14:15 IST
ಅಕ್ಷರ ಗಾತ್ರ

ನವದೆಹಲಿ: ದೇಶದ ರಿಯಲ್‌ ಎಸ್ಟೇಟ್‌ ವಲಯದಲ್ಲಿ ಖಾಸಗಿ ಷೇರು ಹೂಡಿಕೆಯು ಜನವರಿ–ಆಗಸ್ಟ್‌ ಅವಧಿಯಲ್ಲಿ ₹ 6,500 ಕೋಟಿಯಷ್ಟು ಆಗಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 85ರಷ್ಟು ಇಳಿಕೆಯಾಗಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 42,303 ಕೋಟಿ ಹೂಡಿಕೆ ಆಗಿತ್ತು. ಕೋಲಿಯರ್ಸ್‌ ಮತ್ತು ಫಿಕ್ಕಿ ಜಂಟಿಯಾಗಿ ಸಿದ್ಧ‍ಪಡಿಸಿದ ವರದಿಯಲ್ಲಿ ಈ ವಿವರ ಇದೆ. ಕೋವಿಡ್‌–19 ಬಿಕ್ಕಟ್ಟಿನಿಂದಾಗಿ ದೇಶಿ ಮತ್ತು ವಿದೇಶಿ ಹೂಡಿಕೆದಾರರು ದೇಶದ ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ಬಹಳ ಎಚ್ಚರಿಕೆಯಿಂದ ಹೂಡಿಕೆ ಮಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಕ್ಲೌಡ್‌ ಕಂಪ್ಯೂಟಿಂಗ್‌ಗೆ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಡೇಟಾ ಸೆಂಟರ್‌ಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋಲಿಯರ್ಸ್‌ ಇಂಟರ್‌ನ್ಯಾಷನಲ್‌ ಹೂಡಿಕೆದಾರರಿಗೆ ಸಲಹೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT