ಜೈಪುರ: ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿತಗೊಳಿಸಿದ ಬೆನ್ನಿಗೇ, ರಾಜಸ್ಥಾನ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕ್ರಮವಾಗಿ ಲೀಟರ್‌ಗೆ ₹2.48 ಮತ್ತು ₹1.16 ಕಡಿಮೆ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ‘ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತಗೊಳಿಸಿರುವುದರಿಂದ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲೆ ಲೀಟರ್‌ಗೆ ₹2.48 ಮತ್ತು ಡೀಸೆಲ್‌ಗೆ ₹1.16ರಷ್ಟು ವ್ಯಾಟ್ ಕಡಿಮೆ ತಗ್ಗಿಸಲಿದೆ. ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ₹10.48 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ₹7.16 ಅಗ್ಗವಾಗಲಿದೆ’ ಎಂದು ತಿಳಿಸಿದರು.

ಇದಕ್ಕೂ ಮೊದಲು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ ₹8 ಮತ್ತು ₹6 ಕಡಿತ ಮಾಡಿತ್ತು.

‘ಎಕ್ಸೈಸ್ ಸುಂಕ ಕಡಿತದಿಂದಾಗಿ ಪೆಟ್ರೋಲ್ ಮಾರಾಟ ದರವು ಲೀಟರಿಗೆ ₹9.5 ಮತ್ತು ಡೀಸೆಲ್ ದರವು ಲೀಟರಿಗೆ ₹7ರಷ್ಟು ಕಡಿಮೆ ಆಗಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ತಿಳಿಸಿದ್ದರು.

ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರ ಹೇಳಿದೆ.

ಕೇರಳ ಸರ್ಕಾರವು ಶನಿವಾರ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಲೀಟರಿಗೆ ₹2.41 ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಲೀಟರಿಗೆ ₹1.36 ಇಳಿಕೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.