ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ್ಕೊ ಸಿಮೆಂಟ್ಸ್ ಅಧ್ಯಕ್ಷರಾಗಿ ಫಾರೂಕಿ ಆಯ್ಕೆ

Last Updated 28 ಮೇ 2022, 20:32 IST
ಅಕ್ಷರ ಗಾತ್ರ

ಬೆಂಗಳೂರು: ರಾಮ್ಕೊ ಸಿಮೆಂಟ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ (ಸಿಎಂಡಿ) ಹುದ್ದೆಯನ್ನು ಪ್ರತ್ಯೇಕಿಸಲಾಗಿದ್ದು, ಸ್ವತಂತ್ರ ನಿರ್ದೇಶಕ ಎಂ.ಎಫ್‌. ಫಾರೂಕಿ ಅವರನ್ನು ಕಂಪನಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಜೂನ್‌ 4 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ಪ್ರಕಣೆಯಲ್ಲಿ ತಿಳಿಸಿದೆ.

ಸೆಬಿಯ ಕಾರ್ಪೊರೇಟ್‌ ಆಡಳಿತಕ್ಕೆ ಸಂಬಂಧಿಸಿದ ಸಮಿತಿಯ ಶಿಫಾರಸಿನ ಅನ್ವಯ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಕಂಪನಿ ತಿಳಿಸಿದೆ.

ಫಾರೂಕಿ (67 ವರ್ಷ) ಅವರು ನಿವೃತ್ತ ಐಎಎಸ್‌ ಅಧಿಕಾರಿ ಆಗಿದ್ದಾರೆ. ದೂರಸಂಪರ್ಕ ಮತ್ತು ಬೃಹತ್‌ ಕೈಗಾರಿಕೆಗಳ ಕಾರ್ಯದರ್ಶಿ, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸೇರಿದಂತೆ ಇನ್ನೂ ಹಲವು ಸರ್ಕಾರಿ ಹುದ್ದೆಗಳಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

ಪಿ.ಆರ್‌. ವೆಂಕಟರಾಮ ರಾಜ ಅವರು ವ್ಯವಸ್ಥಾಪಕ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ. ಇವರ ಅಧಿಕಾರಾವಧಿಯು ಜೂನ್‌ 3ಕ್ಕೆ ಅಂತ್ಯವಾಗಲಿದ್ದು, ಜೂನ್‌ 4 ರಿಂದ ಜಾರಿಗೆ ಬರುವಂತೆ ಇನ್ನೂ ಐದು ವರ್ಷಗಳ ಅವಧಿಗೆ ವ್ಯವಸ್ಥಾಪ ನಿರ್ದೇಕರಾಗಿ ಮುಂದುವರಿಸಲು ನಿರ್ದೇಶಕರ ಮಂಡಳಿ ಒಪ್ಪಿಗೆ ನೀಡಿದೆ. ಈ ನೇಮಕ್ಕೆ ಷೇರುದಾರರ ಒಪ್ಪಿಗೆ ದೊರೆಯಬೇಕಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT