ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ರಾಮ್‌ರಾಜ್‌ ಕಾಟನ್‌ನಿಂದ ಸಾವಿರ ಕೋಟಿ ಹೂಡಿಕೆ

Published 9 ಜನವರಿ 2024, 15:29 IST
Last Updated 9 ಜನವರಿ 2024, 15:29 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿನಲ್ಲಿ ಮುಂದಿನ ಐದು ವರ್ಷಗಳಲ್ಲಿ ₹1 ಸಾವಿರ ಕೋಟಿ ಹೂಡಿಕೆಗೆ ರಾಮ್‌ರಾಜ್‌ ಕಾಟನ್‌ ಸಂಸ್ಥೆ ಮುಂದಾಗಿದೆ.

ಚೆನ್ನೈನಲ್ಲಿ ಇತ್ತೀಚೆಗೆ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಂಸ್ಥೆಯ ಸಂಸ್ಥಾಪಕ ನಾಗರಾಜನ್‌ ಅವರು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಸಮ್ಮುಖದಲ್ಲಿ ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಿದರು.

ನೂಲುವ ಹಾಗೂ ನೇಯ್ಗೆ ಸಂಸ್ಕರಣಾ ಘಟಕ ಸ್ಥಾಪನೆಗಾಗಿ ಬಂಡವಾಳವನ್ನು ವಿನಿಯೋಗಿಸಲಾಗುತ್ತಿದೆ. ಇದರಿಂದ 5 ಸಾವಿರ ಉದ್ಯೋಗ ಸೃಷ್ಟಿಯಾಗಲಿವೆ ಎಂದು ಸಂಸ್ಥೆ ತಿಳಿಸಿದೆ.  

‘ಈ ಬಂಡವಾಳ ಹೂಡಿಕೆಯಿಂದಾಗಿ ಸಾವಿರಾರು ನೇಕಾರರಿಗೆ ಉದ್ಯೋಗ ದೊರೆಯಲಿದೆ. ಕೈಗಾರಿಕಾ ಅಭಿವೃದ್ಧಿಯ ನೆಲೆಗಟ್ಟಿನಲ್ಲಿ ತಮಿಳುನಾಡು ಪ್ರಗತಿ ಪಥದಲ್ಲಿ ಸಾಗಲು ಸಮಾವೇಶವು ಸಹಕಾರಿಯಾಗಿದೆ’ ಎಂದು ನಾಗರಾಜನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT