ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮ್‌ರಾಜ್‌ ಕಾಟನ್‌ನ ಎರಡು ಘಟಕ ಉದ್ಘಾಟನೆ

Published : 25 ಆಗಸ್ಟ್ 2024, 20:08 IST
Last Updated : 25 ಆಗಸ್ಟ್ 2024, 20:08 IST
ಫಾಲೋ ಮಾಡಿ
Comments

ಬೆಂಗಳೂರು: ತಮಿಳುನಾಡಿನ ತಿರುಪ್ಪುರ್‌ನ ಇಡುವಂಪಾಲ್ಯಂ ಮತ್ತು ಈರೋಡು ಬಳಿಯ ಪೆರುಂದುರೈ ಬಳಿ ರಾಮ್‌ರಾಜ್‌ ಕಾಟನ್‌ನ ಎರಡು ಹೊಸ ಘಟಕಗಳನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಇತ್ತೀಚೆಗೆ ಉದ್ಘಾಟಿಸಿದರು.

ಪ್ರಸಕ್ತ ವರ್ಷದ ಜನವರಿಯಲ್ಲಿ ಚೆನ್ನೈನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಮ್‌ರಾಜ್‌ ಕಾಟನ್‌ ₹1 ಸಾವಿರ ಕೋಟಿ ವೆಚ್ಚದಲ್ಲಿ ಎರಡು ಹೊಸ ಕೈಗಾರಿಕಾ ಘಟಕ ಸ್ಥಾಪಿಸುವ ಬಗ್ಗೆ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿತ್ತು. ಈ ಒಪ್ಪಂದದ ಪತ್ರವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಹಸ್ತಾಂತರಿಸಲಾಗಿತ್ತು.

‘ಈ ಎರಡು ಹೊಸ ಕೈಗಾರಿಕೆಗಳಿಂದ ನೇರವಾಗಿ 2 ಸಾವಿರ ಮತ್ತು ಪರೋಕ್ಷವಾಗಿ 5 ಸಾವಿರ ಜನರಿಗೆ ಉದ್ಯೋಗ ಸಿಗಲಿವೆ. ಜೊತೆಗೆ, ತಮಿಳುನಾಡಿನ ಕೈಗಾರಿಕಾ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದು ಕಂಪನಿಯ ಸಂಸ್ಥಾಪಕ ಮತ್ತು ಅಧ್ಯಕ್ಷ ಕೆ.ಆರ್. ನಾಗರಾಜನ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT