ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೇಮಂಡ್‌ಗೆ ₹229 ಕೋಟಿ ಲಾಭ

Published 3 ಮೇ 2024, 13:53 IST
Last Updated 3 ಮೇ 2024, 13:53 IST
ಅಕ್ಷರ ಗಾತ್ರ

ನವದೆಹಲಿ: ರೇಮಂಡ್‌ ಲಿಮಿಟೆಡ್‌ 2023–24ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹229 ಕೋಟಿ ತೆರಿಗೆ ನಂತರದ ಲಾಭ ಗಳಿಸಿದೆ. 

2022–23ರ ಇದೇ ತ್ರೈಮಾಸಿಕದಲ್ಲಿ ₹194 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 18ರಷ್ಟು ಏರಿಕೆಯಾಗಿದೆ.

ವರಮಾನದಲ್ಲಿ ಶೇ 23ರಷ್ಟು ಹೆಚ್ಚಳವಾಗಿದ್ದು, ₹2,192 ಕೋಟಿಯಿಂದ ₹2,688 ಕೋಟಿಗೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ ಲಾಭದಲ್ಲಿ ಏರಿಕೆಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

2023–24ರ ಪೂರ್ಣ ಹಣಕಾಸು ವರ್ಷದಲ್ಲಿ ತೆರಿಗೆ ನಂತರದ ಲಾಭವು ₹529 ಕೋಟಿಯಿಂದ ₹1,638 ಕೋಟಿಗೆ ಏರಿಕೆಯಾಗಿದೆ. ವರಮಾನವು ₹8,337 ಕೋಟಿಯಿಂದ ₹9,286 ಕೋಟಿಗೆ ಹೆಚ್ಚಳವಾಗಿದೆ ಎಂದು ತಿಳಿಸಿದೆ. 

ರೇಮಂಡ್‌ ಲಿಮಿಟೆಡ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್‌  ಸಿಂಘಾನಿಯಾ ಅವರನ್ನು ಜುಲೈ 1ರಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂದುವರಿಸಲು ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT