ಭಾನುವಾರ, ಸೆಪ್ಟೆಂಬರ್ 20, 2020
22 °C

ಎಂಎಸ್‌ಎಂಇಗೆ ಸ್ಪಂದಿಸಿದ ಆರ್‌ಬಿಐ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

RBI

ಮುಂಬೈ: ಕೋವಿಡ್‌–19 ಸಾಂಕ್ರಾಮಿಕದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳ (ಎಂಎಸ್‌ಎಂಇ) ನೆರವಿಗೆ ಆರ್‌ಬಿಐ ಬಂದಿದೆ. ಎಂಎಸ್‌ಎಂಇ ವಲಯದ ಉದ್ದಿಮೆಗಳಿಗೆ, ಕಂಪನಿಗಳಿಗೆ ಮತ್ತು ವೈಯಕ್ತಿಕ ಸಾಲ ಪಡೆದವರಿಗೆ ಒಂದು ಬಾರಿ ಸಾಲ ಮರುಹೊಂದಾಣಿಕೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಿದೆ.

2020ರ ಮಾರ್ಚ್‌ 1ರವರೆಗೆ, ಸಾಲ ಬಾಕಿ ಉಳಿಸಿಕೊಳ್ಳದೇ ಇರುವವರಿಗೆ ಈ ಸೌಲಭ್ಯ ಅನ್ವಯವಾಗಲಿದೆ. ಬ್ಯಾಂಕ್‌ಗಳು ಇಂತಹ ಸಾಲಗಾರರ ಸಾಲ ಮರುಪಾವತಿ ಅವಧಿಯನ್ನು ಹೆಚ್ಚಿಸುವ ಅಥವಾ ಸಾಲದ ಇಎಂಐ ಪಾವತಿಯನ್ನು ವಿಸ್ತರಿಸುವ ತೀರ್ಮಾನ ಕೈಗೊಳ್ಳಬಹುದು. ಇದಕ್ಕಾಗಿ ಶೇಕಡ 5ರಷ್ಟು ಹೆಚ್ಚುವರಿ ನಗದನ್ನು ತೆಗೆದಿರಿಸುವಂತೆ ಬ್ಯಾಂಕ್‌ಗಳಿಗೆ ಆರ್‌ಬಿಐ ತಿಳಿಸಿದೆ.

ವಹಿವಾಟು ನಡೆಸಲು ಅನುಕೂಲ

‘ಸಾಲ ಮರುಹೊಂದಾಣಿಕೆ ಸೌಲಭ್ಯದಿಂದ ಬಹಳಷ್ಟು ಸಣ್ಣ ಉದ್ದಿಮೆಗಳು ಆರ್ಥಿಕ ಸಂಕಷ್ಟದಿಂದ ಹೊರಬಂದು, ವಹಿವಾಟು ಮುಂದುವರಿಸಲು ಸಾಧ್ಯವಾಗಲಿದೆ. ಎಂಎಸ್‌ಎಂಇಗಳಿಗೆ ಸಾಲದ ಹರಿವನ್ನು ಖಾತರಿಪಡಿಸುವ ಉದ್ದೇಶದಿಂದ ಅರ್ಹವಾದ ಮತ್ತು ಅಗತ್ಯ ಇರುವ ಕಡೆಗಳಲ್ಲಿ ಸಾಲಗಳ ಮರುಹೊಂದಾಣಿಕೆ ಮಾಡಬೇಕಾಗಿದೆ’ ಎಂದು ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ ಅಭಿಪ್ರಾಯಪಟ್ಟಿದ್ದಾರೆ.

‘ಈ ಬಿಕ್ಕಟ್ಟಿನ ಸಂದರ್ಭದಲ್ಲಿ, ಉದ್ಯಮವು ತನ್ನ ಕಾಲುಗಳ ಮೇಲೆ ನಿಲ್ಲಲು ಸಾಧ್ಯವಾಗುವಂತೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಕೆಲವು ತಿಂಗಳುಗಳವರೆಗೆ ಸಾಲದ ಕಂತು ಪಾವತಿ ಅವಧಿ ಮುಂದೂಡಿಕೆ ವಿಸ್ತರಿಸುವ ಅವಶ್ಯಕತೆ ಇದೆ’ ಎಂದೂ ಅವರು ಹೇಳಿದ್ದಾರೆ.

ಅಂಕಿ–ಅಂಶ

ಎಂಎಸ್‌ಎಂಇ ಕೊಡುಗೆ

28% -ದೇಶದ ಜಿಡಿಪಿಗೆ

 40% ಕ್ಕೂ ಅಧಿಕ -ರಫ್ತು ವಲಯಕ್ಕೆ 

11 ಕೋಟಿ -ಉದ್ಯೋಗ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು