ಸೋಮವಾರ, ಆಗಸ್ಟ್ 15, 2022
26 °C

ಪಿಎಂಸಿ ಬ್ಯಾಂಕ್ ಸ್ವಾಧೀನಕ್ಕೆ ‘ಸೆಂಟ್ರಂ’ ಹಾದಿ ಸುಗಮ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಸೆಂಟ್ರಂ ಫೈನಾನ್ಶಿಯಲ್ ಸರ್ವಿಸಸ್ ಕಂಪನಿಗೆ ಕಿರು ಹಣಕಾಸು ಬ್ಯಾಂಕ್‌ ಆರಂಭಿಸಲು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಅನುಮತಿ ನೀಡಿದೆ. ಈ ಮೂಲಕ, ಹಣಕಾಸಿನ ಸಮಸ್ಯೆಯಲ್ಲಿ ಸಿಲುಕಿರುವ ಪಂಜಾಬ್ ಆ್ಯಂಡ್ ಮಹಾರಾಷ್ಟ್ರ ಸಹಕಾರ (ಪಿಎಂಸಿ) ಬ್ಯಾಂಕ್‌ಅನ್ನು ಸ್ವಾಧೀನ ಮಾಡಿಕೊಳ್ಳಲು ಸೆಂಟ್ರಂ ಕಂಪನಿಗೆ ಹಾದಿ ಸುಗಮವಾದಂತೆ ಆಗಿದೆ.

ಪಿಎಂಸಿ ಬ್ಯಾಂಕ್‌ ಸ್ವಾಧೀನಕ್ಕೆ ತೆಗೆದುಕೊಳ್ಳಲು ಆಸಕ್ತಿ ತೋರಿ ಅರ್ಜಿ ಸಲ್ಲಿಸಿದ್ದ ಕಂಪನಿಗಳ ಪೈಕಿ ಸೆಂಟ್ರಂ ಫೈನಾನ್ಶಿಯಲ್ ಸರ್ವಿಸಸ್ ಕೂಡ ಒಂದು.

ಸೆಂಟ್ರಂ ಕಂಪನಿಗೆ ಕಿರು ಹಣಕಾಸಿನ ಬ್ಯಾಂಕ್ ಆರಂಭಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಆರ್‌ಬಿಐ ಹೇಳಿದೆ. ಪಿಎಂಸಿ ಬ್ಯಾಂಕ್‌ನಲ್ಲಿ ಹಣ ಹೂಡಿಕೆ ಮಾಡಲು ನಾಲ್ಕು ಪ್ರಸ್ತಾವಗಳು ಸಲ್ಲಿಕೆಯಾಗಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು