ಮುಂಬೈ: 2022–23ರಲ್ಲಿ ಕೇಂದ್ರ ಸರ್ಕಾರಕ್ಕೆ ₹87,416 ಕೋಟಿ ಲಾಭಾಂಶ ಪಾವತಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಒಪ್ಪಿಗೆ ನೀಡಿದೆ.
2021–22ರಲ್ಲಿ ಆರ್‌ಬಿಐ ಲಾಭಾಂಶದ ರೂಪದಲ್ಲಿ ₹30,307 ಕೋಟಿ ಆರ್‌ಬಿಐ ಸರ್ಕಾರಕ್ಕೆ ನೀಡಿತ್ತು. ಈ ಮೊತ್ತಕ್ಕೆ ಹೋಲಿಸಿದರೆ 2022–23ರಲ್ಲಿ ನೀಡುವ ಮೊತ್ತದಲ್ಲಿ ಸುಮಾರು ಮೂರು ಪಟ್ಟು ಏರಿಕೆ ಕಂಡುಬಂದಿದೆ.
ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದಲ್ಲಿ ನಡೆದ ನಿರ್ದೇಶಕ ಮಂಡಳಿ ಸಭೆಯಲ್ಲಿ ಲಾಭಾಂಶ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಜಾಗತಿಕ ಮತ್ತು ದೇಶದ ಆರ್ಥಿಕ ಸ್ಥಿತಿ, ಸವಾಲುಗಳು ಮತ್ತು ಸದ್ಯದ ಜಾಗತಿಕ ರಾಜಕೀಯ ಬೆಳವಣಿಗೆಗಳ ಪರಿಣಾಮಗಳ ಕುರಿತಾಗಿಯೂ ಸಭೆಯಲ್ಲಿ ಚರ್ಚಿಸಲಾಯಿತು.