ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಪೊ ದರ ಕಡಿತ ಕಷ್ಟ: ಎಸ್‌ಬಿಐ ಅರ್ಥಶಾಸ್ತ್ರಜ್ಞರ ಅಭಿಪ್ರಾಯ

Last Updated 21 ಆಗಸ್ಟ್ 2020, 12:16 IST
ಅಕ್ಷರ ಗಾತ್ರ

ಮುಂಬೈ: ಹಣದುಬ್ಬರವು ಗಣನೀಯವಾಗಿ ಕಡಿಮೆ ಆಗುವ ಸಾಧ್ಯತೆ ಇಲ್ಲದಿರುವ ಕಾರಣ, ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ರೆಪೊ ದರಗಳನ್ನು ಇನ್ನಷ್ಟು ತಗ್ಗಿಸಲು ಆಗಲಿಕ್ಕಿಲ್ಲ ಎಂದು ಭಾರತೀಯ ಸ್ಟೇಟ್‌ ಬ್ಯಾಂಕ್‌ನ (ಎಸ್‌ಬಿಐ) ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ಅರ್ಥವ್ಯವಸ್ಥೆಗೆ ಚೈತನ್ಯ ತುಂಬುವ ಹೊಣೆ ಈಗ ಸರ್ಕಾರದ ಮೇಲಿದೆ ಎಂದೂ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರ್‌ಬಿಐ ಈಚಿನ ತಿಂಗಳುಗಳಲ್ಲಿ ರೆಪೊ ದರವನ್ನು ಒಟ್ಟು ಶೇಕಡ 1.15ರಷ್ಟು ತಗ್ಗಿಸಿತ್ತು. ಆದರೆ, ರೆಪೊ ದರವನ್ನು ಇನ್ನಷ್ಟು ಕಡಿಮೆ ಮಾಡಲು ಆಗಸ್ಟ್‌ನಲ್ಲಿ ನಡೆದ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ನಿರಾಕರಿಸಿತ್ತು.

‘ಗರಿಷ್ಠವೆಂದರೆ, ರೆಪೊ ದರಗಳಲ್ಲಿ ಇನ್ನೂ ಶೇ 0.25ರಷ್ಟು ಕಡಿತ ಆಗಬಹುದು’ ಎಂದು ಎಸ್‌ಬಿಐನ ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ಉತ್ಪನ್ನಗಳ ಪೂರೈಕೆ ಜಾಲದಲ್ಲಿ ಉಂಟಾಗಿದ್ದ ಸಮಸ್ಯೆಗಳು ನಿವಾರಣೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಇದು ಹಲವು ರಾಜ್ಯಗಳಲ್ಲಿ ಸಮಸ್ಯೆ ತಂದೊಡ್ಡಿದೆ ಎಂಬುದು ಅವರ ಅಭಿಪ್ರಾಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT