ಮುಂಬೈ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ತಿಳಿಸಿದೆ.

ಬ್ಯಾಂಕ್ ಮತ್ತು ಠೇವಣಿದಾರರ ಹಿತಾಸಕ್ತಿಗೆ ವಿರುದ್ಧವಾದ ರೀತಿಯಲ್ಲಿ ವ್ಯವಹಾರಗಳನ್ನು ನಡೆಸಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ಬಿಐ ಹೇಳಿದೆ.

‘ಬ್ಯಾಂಕ್ನ ಆಡಳಿತ ಮಂಡಳಿಯ ವರ್ತನೆಯು ಠೇವಣಿದಾರರು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದರ ಪರಿಣಾಮವಾಗಿ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಭವಿಷ್ಯದಲ್ಲಿ ಯಾವುದೇ ಬ್ಯಾಂಕಿಂಗ್ ವ್ಯವಹಾರವನ್ನು ನಡೆಸದಂತೆ ನಿಷೇಧಿಸಲಾಗಿದೆ’ ಎಂದು ತಿಳಿಸಿದೆ.

‘ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮುಚ್ಚಲು ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು. ಬ್ಯಾಂಕ್ಗೆ ಬಾಗಿಲು ಹಾಕಬೇಕಾದ ಸಂದರ್ಭ ಬಂದರೂ ತನ್ನೆಲ್ಲಾ ಠೇವಣಿದಾರರ ಹಣವನ್ನು ಮರುಪಾವತಿಸಲು ಬೇಕಾದಷ್ಟು ನಗದನ್ನು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಂದಿದೆ’ ಎಂದು ಆರ್ಬಿಐ ಹೇಳಿದೆ.

2022ರ ಮಾರ್ಚ್ 11ರಿಂದ ಜಾರಿಗೆ ಬರುವಂತೆ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಳ್ಳದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ಆರ್ಬಿಐ ನಿರ್ಬಂಧ ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.