ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಮಾಹಿತಿ ಆಯೋಗದಿಂದ ಆರ್‌ಬಿಐ ಗವರ್ನರ್‌ಗೆ ನೋಟಿಸ್‌

Last Updated 5 ನವೆಂಬರ್ 2018, 3:11 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್‌ ಇಂಡಿಯಾ (ಆರ್‌ಬಿಐ) ನಡುವಣ ಬಿಕ್ಕಟ್ಟು ಉಲ್ಬಣಿಸಿರುವ ಬೆನ್ನಲ್ಲೇ ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಅವರಿಗೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.

ಬ್ಯಾಂಕ್‌ಗಳಲ್ಲಿ ₹50 ಕೋಟಿ ಮತ್ತು ಅದಕ್ಕಿಂತ ಹೆಚ್ಚು ಸಾಲಪಡೆದವರ ವಿವರಗಳನ್ನು ಬಹಿರಂಗಗೊಳಿಸುವಂತೆ ಸುಪ್ರೀಂಕೋರ್ಟ್‌ ಆದೇಶಿಸಿದ್ದರೂ ಅದನ್ನು ನೀಡಲು ನಿರಾಕರಿಸಿದ ಕಾರಣ ‘ನಿಮ್ಮ ಮೇಲೆ ಗರಿಷ್ಠ ದಂಡವನ್ನು ಏಕೆ ವಿಧಿಸಬಾರದು’ ಎಂದು ಕಾರಣ ಕೇಳಿ ಈ ನೋಟಿಸ್‌ ನೀಡಿದೆ.

ಆರ್‌ಬಿಐ ನಿವೃತ್ತ ಗವರ್ನರ್‌ ರಘುರಾಂ ರಾಜನ್‌ ಅವರು ಅನುತ್ಪಾದಕ ಸಾಲಕ್ಕೆ ಸಂಬಂಧಿಸಿ ಬರೆದಿರುವ ಪತ್ರವನ್ನು ಬಹಿರಂಗಗೊಳಿಸುವಂತೆಯೂ ಪ್ರಧಾನಿ ಕಾರ್ಯಾಲಯ, ಹಣಕಾಸು ಸಚಿವಾಲಯ ಮತ್ತು ಸಿಐಸಿ ಸೂಚಿಸಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT