ಮಂಗಳವಾರ, ಫೆಬ್ರವರಿ 7, 2023
26 °C

ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ: ಆರ್‌ಬಿಐ ತಾಕೀತು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಸಾಲ ವಸೂಲಿ ಏಜೆಂಟರು ಸಾಲ ಪಡೆದವರಿಗೆ ಬೆದರಿಕೆ ಹಾಕುವಂತೆ ಇಲ್ಲ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ತಾಕೀತು ಮಾಡಿದೆ. ಅಲ್ಲದೆ, ವಸೂಲಿ ಏಜೆಂಟರು ಸಾಲಗಾರರಿಗೆ ಬೆಳಿಗ್ಗೆ 8 ಗಂಟೆಯ ಮೊದಲು ಹಾಗೂ ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಕೂಡ ಹೇಳಿದೆ.

ಬ್ಯಾಂಕ್‌, ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಮತ್ತು ಆಸ್ತಿ ಪುನರ್‌ರಚನಾ ಕಂಪನಿಗಳಿಗೆ (ಎಆರ್‌ಸಿ) ಈ ಹೆಚ್ಚುವರಿ ಸೂಚನೆಗಳು ಅನ್ವಯವಾಗುತ್ತವೆ. ಸಾಲದ ವಸೂಲಾತಿಗೆ ಸಂಬಂಧಿಸಿದಂತೆ ತಾನು ನೀಡಿದ್ದ ಸೂಚನೆಗಳನ್ನು ಏಜೆಂಟರು ಪಾಲಿಸುತ್ತಿಲ್ಲ ಎಂದು ಆರ್‌ಬಿಐ ಹೇಳಿದೆ.

ಈ ಸೂಚನೆಗಳು ಎಲ್ಲ ವಾಣಿಜ್ಯ ಬ್ಯಾಂಕ್‌ಗಳಿಗೆ (ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸೇರಿದಂತೆ), ಸಹಕಾರ ಬ್ಯಾಂಕ್‌ಗಳಿಗೆ ಕೂಡ ಅನ್ವಯವಾಗುತ್ತವೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು