ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

Published 5 ಅಕ್ಟೋಬರ್ 2023, 14:06 IST
Last Updated 5 ಅಕ್ಟೋಬರ್ 2023, 14:06 IST
ಅಕ್ಷರ ಗಾತ್ರ

ಕೋಲ್ಕತ್ತ: ಹಣದುಬ್ಬರದ ಆತಂಕ ಮತ್ತು ಜಾಗತಿಕ ವಿದ್ಯಮಾನಗಳಿಂದಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ರೆಪೊ ದರವನ್ನು ಶೇ 6.5ರಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಅವರ ನೇತೃತ್ವದ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಬುಧವಾರದಿಂದ ಸಭೆ ಸೇರಿದ್ದು, ಶುಕ್ರವಾರ ಸಭೆಯ ನಿರ್ಧಾರಗಳು ಪ್ರಕಟವಾಗಲಿವೆ.

ಹೊಂದಾಣಿಕೆಯ ನೀತಿಯನ್ನು ಕೈಬಿಡುವ ಜೊತೆಗೆ ಬಡ್ಡಿದರವನ್ನು ಶೇ 6.5ರಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಬ್ಯಾಂಕ್‌ ಆಫ್‌ ಬರೋಡದ ಮುಖ್ಯ ಆರ್ಥಿಕ ತಜ್ಞ ಮದನ್‌ ಸಬ್ನವಿಸ್ ಹೇಳಿದ್ದಾರೆ.

2022ರ ಮೇ ತಿಂಗಳಿನಿಂದ 2023ರ ಫೆಬ್ರುವರಿ ಅವಧಿಯಲ್ಲಿ ಆರ್‌ಬಿಐ ರೆಪೊ ದರವನ್ನು ಶೇ 2.50ರಷ್ಟು ಹೆಚ್ಚಳ ಮಾಡಿದೆ. ಚಿಲ್ಲರೆ ಹಣದುಬ್ಬರವು ಆಗಸ್ಟ್‌ನಲ್ಲಿ ಶೇ 6.83ರಷ್ಟು ಆಗಿದ್ದು, ಆರ್‌ಬಿಐ ಹಾಕಿಕೊಂಡಿರುವ ಗರಿಷ್ಠ ಮಿತಿಯಾದ ಶೇ 6ಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT