ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24ರಿಂದ ಚಿನ್ನದ ಬಾಂಡ್‌ನ ಎರಡನೇ ಕಂತು: ನೀಡಿಕೆ ಬೆಲೆ ಗ್ರಾಂಗೆ ₹ 4,842

Last Updated 22 ಮೇ 2021, 11:29 IST
ಅಕ್ಷರ ಗಾತ್ರ

ಮುಂಬೈ: 2021–22ನೇ ಸಾಲಿನ ಚಿನ್ನದ ಬಾಂಡ್‌ನ ಎರಡನೇ ಕಂತು ಸೋಮವಾರ ಆರಂಭವಾಗಲಿದ್ದು, ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ನೀಡಿಕೆ ಬೆಲೆಯನ್ನು ಪ್ರತಿ ಗ್ರಾಂಗೆ ₹ 4,842ರಷ್ಟು ನಿಗದಿಪಡಿಸಿದೆ.

ಬಾಂಡ್‌ ಖರೀದಿಸಲು ಆನ್‌ಲೈನ್‌ ಮೂಲಕ ಹಣ ಪಾವತಿಸುವವರಿಗೆ ಪ್ರತಿ ಗ್ರಾಂಗೆ ₹ 50ರಂತೆ ವಿನಾಯಿತಿ ಸಿಗಲಿದೆ. ಹೀಗಾಗಿ ಇಂತಹ ಹೂಡಿಕೆದಾರರಿಗೆ ನೀಡಿಕೆ ಬೆಲೆ ₹ 4,792 ಇರಲಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಬಾಂಡ್‌ ಖರೀದಿಸಲು ಅವಕಾಶ ಇರಲಿದೆ. ಮೇ 25ರಂದು ಬಾಂಡ್‌ ವಿತರಣೆ ಆಗಲಿದೆ.

ಬ್ಯಾಂಕುಗಳು (ಕಿರು ಹಣಕಾಸು ಬ್ಯಾಂಕ್ ಮತ್ತು ಪೇಮೆಂಟ್‌ ಬ್ಯಾಕ್ಸ್‌ ಹೊರತುಪಡಿಸಿ), ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ, ಅಂಚೆ ಕಚೇರಿ, ಬಿಎಸ್‌ಇ ಮತ್ತು ಎನ್‌ಎಸ್ಇ ಮೂಲಕ ಚಿನ್ನದ ಬಾಂಡ್‌ ಮಾರಾಟ ನಡೆಯಲಿದೆ.

ಕನಿಷ್ಠ ಹೂಡಿಕೆ 1 ಗ್ರಾಂ ಇರಲಿದೆ. ವೈಯಕ್ತಿಕ ಖರೀದಿದಾರರಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಕ್ಕೆ 4 ಕೆ.ಜಿ ಹಾಗೂ ಟ್ರಸ್ಟ್‌ಗಳಿಗೆ 20 ಕೆ.ಜಿಯ ಗರಿಷ್ಠ ಮಿತಿ ನೀಡಲಾಗಿದೆ.

ಮೇ ತಿಂಗಳಿನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ ಒಟ್ಟು ಆರು ಕಂತುಗಳಲ್ಲಿ ಚಿನ್ನದ ಬಾಂಡ್ ವಿತರಣೆ ನಡೆಯಲಿದೆ ಎಂದು ಆರ್‌ಬಿಐ ಹೇಳಿದೆ.

ಭೌತಿಕ ರೂಪದ ಚಿನ್ನದ ಬೇಡಿಕೆ ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು 2015ರಲ್ಲಿ ಚಿನ್ನದ ಬಾಂಡ್‌ ಯೋಜನೆ ಜಾರಿಗೆ ತಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT